‘ಸಮೃದ್ಧಿ ಸಂತೃಪ್ತಿ’ ಗ್ರಾಮೀಣ ಮಹಿಳೆಯರ ಸಬಲೀಕರಣ ಕಾರ್ಯಾಗಾರ
ವಿಜಯಪುರ 27: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ, ಮತ್ತು ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ವಿಜಯಪುರ ಶಾಖೆ ಇವರ ಸಹಯೋಗದಲ್ಲಿ ‘ಸಮೃದ್ಧಿ ಸಂತೃಪ್ತಿ’ ಗ್ರಾಮೀಣ ಮಹಿಳೆಯರ ಸಬಲೀಕರಣದಲ್ಲಿ ಸೌರಶಕ್ತಿಯ ಪಾತ್ರ ಎಂಬ ವಿಷಯದ ಕುರಿತು ಎರಡು ದಿನಗಳ ಕಾರ್ಯಾಗಾರವನ್ನು ಇದೇ ದಿ. 28 ಮತ್ತು 29 ರಂದು ಬೆಳಿಗ್ಗೆ 9:00 ಗಂಟೆಗೆ ಕನ್ನಡ ಅಧ್ಯಯನ ಸಭಾಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಾಗಾರವನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಿ.ಎಸ್.ರಾಠೋಡ ಹಾಗೂ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಸಿ.ಬಿ.ಕುಂಬಾರ ಭಾಗವಹಿಸಿಲಿದ್ದಾರೆ ಎಂದು ಮಹಿಳಾ ವಿವಿಯ ಪ್ರೊ.ಲಕ್ಷ್ಮೀ ವೈ ಹಾಗೂ ಬೆಂಗಳೂರಿನ ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್‌ನ ಮುಖ್ಯ ವ್ಯವಸ್ಥಾಪಕಿ ಸಂಹಿತಾ ಮಜುಂದಾರ್ ಭಟ್ಟಾಚಾರ್ಯ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.