ಕೊಪ್ಪಳ 10: ಅಂಗನವಾಡಿ ಕಾರ್ಯಕರ್ತೆ ರು ತಾಯಂದರಿಗೆ ಸ್ವಚ್ಛತೆ ಹಾಗೂ ಕಸ ವಿಗಂಡಿಸುವ ಕುರಿತು ಮಾಹಿತಿ ನೀಡಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ರವಿ ಬಿಸರಳ್ಳಿರವರು ಹೇಳಿದರು.
ಮಾದರಿ ಗ್ರಾಮ ಕುರಿತು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಗ್ರಾಮ ಪಂಚಾಯತನಲ್ಲಿ ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.
ಕೊಪ್ಪಳ ಜಿಲ್ಲೆಯನ್ನು ಬಯಲು ಬಹಿದರ್ೆಸೆ ಮುಕ್ತ ಜಿಲ್ಲೆಯಂದು ಘೋಷಣೆಯಾದ ನಂತರ ಸುಸ್ಥಿರತೆಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ನಿಟ್ಟಿನಲ್ಲಿ ಮಾದರಿ ಗ್ರಾಮ ಪಂಚಾಯತಿಯನ್ನಾಗಿ ಮಾಡಲು ಎಲ್ಲಾ ವಾರ್ಡಗಳಲ್ಲಿ ಗ್ರಾಮ ಪಂಚಾಯತ ಸದಸ್ಯರ ನೇತೃತ್ವದಲ್ಲಿ ವಾರ್ಡ ಸಭೆ ಮಾಡುವ ಮೂಲಕ ಸಾರ್ವಜನಿಕರಿಗೆ ತ್ಯಾಜ್ಯ ವಿಂಗಡಣೆ ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಘನ ತ್ಯಾಜ್ಯ ವಿಲೇವಾರಿ ಮಾಡಲು ಪ್ಲಾಸ್ಟಿಕ್ ಮುಕ್ತ ಮಾಡಲು ವೈಧ್ಯಕೀಯ ಸಂಸ್ಥೆಗಳಲ್ಲಿ ತ್ಯಾಜ್ಯ ನಿರ್ವಹಣೆ ಮಾಡಲು ಹಾಗೂ ಸುಸ್ಥಿರತೆಯನ್ನು ಕಾಪಾಡಿಕೊಳ್ಳಲು ಮೂರು ಗ್ರಾಮ ಪಂಚಾಯತಗಳಾದ ಗಂಗಾವತಿ ತಾಲೂಕಿನ ಶ್ರೀರಾಮನಗರ, ಕೊಪ್ಪಳ ತಾಲೂಕಿನ ಅಳವಂಡಿ ಹಾಗೂ ಮುನಿರಾಬಾದ್ ಡ್ಯಾಂ ಗ್ರಾಮ ಪಂಚಾಯತಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಶಾಲೆ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳಿಗೆ ಸ್ವಚ್ಛತೆ ಕುರಿತು, ತ್ಯಾಜ್ಯ ವಿಲೇವಾರಿ ಹಾಗೂ ಶೌಚಾಲಯಗಳ ಬಳಕೆ, ಶೌಚಾಲಯ ಬಳಸಿದ ನಂತರ ಕೈ ತೊಳೆಯುವ ಕುರಿತು ಪ್ರತಿ ದಿನ ಪ್ರಾರ್ಥನೆ ಸಮಯದಲ್ಲಿ ಮಕ್ಕಳಿಂದ ಹೇಳಿಸುವುದರ ಮೂಲಕ ಎಲ್ಲಾ ಮಕ್ಕಳಿಗೆ ಈ ಕುರಿತು ಜಾಗೃತಿ ಮೂಡಿಸಬೇಕು. ಅಂಗನವಾಡಿ ಕಾರ್ಯಕತರ್ೆಯರು ತಾಯಂದರಿಗೆ ಸ್ವಚ್ಛತೆ ಹಾಗೂ ಕಸ ವಿಗಂಡಿಸುವ ಕುರಿತು ಮಾಹಿತಿ ನೀಡಬೇಕು. ಶಾಲಾ ಮಕ್ಕಳ ಮೂಲಕ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿ.ಪಂ ಯೋಜನಾ ನಿದರ್ೇಶಕ ರವಿ ಬಸರಿಹಳ್ಳಿರವರು ಹೇಳಿದರು.
ಕೊಪ್ಪಳ ತಾಲೂಕ ಪಂಚಾಯತ ಅಧ್ಯಕ್ಷ ಬಾಲಚಂದ್ರನ್ರವರು ಮಾತನಾಡಿ, ಒಂದು ಗ್ರಾಮ ಪಂಚಾಯತನ್ನು ಪ್ಲಾಸ್ಟಿಕ್ ಮುಕ್ತ ಮಾಡುವುದು ನಮ್ಮ ನಿಮ್ಮೆಲ್ಲರ ಹೊಣೆ ಎಲ್ಲರೂ ಒಂದಾಗಿ ಆರೋಗ್ಯ ಗ್ರಾಮ ನಮ್ಮ ಗ್ರಾಮ ಎಂದು ಜನಿರಿಗೆ ತಿಳಿಸೋಣ ಎಂದರು.
ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಯರು, ಜಿಲ್ಲಾ ಸಮಾಲೋಚಕರು ಹಾಗೂ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.