ವರನಟ ಡಾ.ರಾಜಕುಮಾರ್ ಅವರ 97ನೇ ಜನ್ಮದಿನಾಚರಣೆ

Actor Dr. Rajkumar's 97th birthday celebration

ವರನಟ ಡಾ.ರಾಜಕುಮಾರ್ ಅವರ 97ನೇ  ಜನ್ಮದಿನಾಚರಣೆ 

ಗದಗ 22: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವರನಟ ಡಾ. ರಾಜಕುಮಾರ್ ಅವರ 97 ನೇ ಜನ್ಮದಿನಾಚರಣೆ  ಕಾರ್ಯಕ್ರಮವನ್ನು ಏಪ್ರಿಲ್ 24 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ  ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು.  ಕಾರ್ಯಕ್ರಮವನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್‌.ಕೆ.ಪಾಟೀಲ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ  ಬಸವರಾಜ ಬೊಮ್ಮಾಯಿ,  ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್,  ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್‌.ಪಾಟೀಲ, ಸಂಸದರುಗಳಾದ  ಪಿ.ಸಿ.ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯರುಗಳಾದ ಎಸ್‌.ವಿ.ಸಂಕನೂರ, ಪ್ರದೀಪ ಶೆಟ್ಟರ್ , ನರಗುಂದ ಶಾಸಕರಾದ ಸಿ.ಸಿ.ಪಾಟೀಲ, ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷರಾದ  ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ  ಅವರುಗಳು ಆಗಮಿಸುವರು. ಹುಬ್ಬಳ್ಳಿಯ ಚಲನಚಿತ್ರ ನಿರ್ದೇಶಕರು ಹಾಗೂ ನಟರಾದ ದೀಲೀಪ್ ಶರ್ಮಾ ಅವರು  ಉಪನ್ಯಾಸ ನೀಡುವರು. ಗೌಡಪ್ಪ ಬೊಮ್ಮಪ್ಪನವರ ಮತ್ತು ತಂಡದವರು  ಡಾ. ರಾಜಕುಮಾರ್ ಚಿತ್ರಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ರಮಣದೀಪ್ ಚೌಧರಿ,  ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್,  ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್‌.ನೇಮಗೌಡ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ  ಸರ್ವರಿಗೂ ಸ್ವಾಗತ ಕೋರಿದ್ದಾರೆ.