ನವದೆಹಲಿ, ಆಗಸ್ಟ್ 3 ಸಾರ್ವಜನಿಕ, ಸಂಸದಿಯ ನಡವಳಿಕೆ, ಹಕ್ಕುಗಳ ಬಗ್ಗೆ ಸಂಸತ್ತಿನ ಉಭಯ ಸದನಗಳ ಸದಸ್ಯರಿಗೆ ಬಿಜೆಪಿ ವಿಶಿಷ್ಟ ತರಬೇತಿ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಿದ್ದು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಪಾಠ ಮಾಡಲಿದ್ದಾರೆ. ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿ ಆಯೋಜಿಸಿರುವ ಎರಡು ದಿನಗಳ ತರಬೇತಿ ಕಾರ್ಯಾಗಾರ 'ಅಭ್ಯಾಸ್ ವರ್ಗ' ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಹೊಸದಾಗಿ ಚುನಾಯಿತರಾದ ಸಂಸದರು ತಮ್ಮ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಹೇಗೆ ನಿರ್ವಹಿಸಬೇಕು, ಸಂಸದೀಯ ಚರ್ಚೆಯಲ್ಲಿ ಭಾಗವಹಿಸುವುದು, ಪ್ರಶ್ನೆಗಳನ್ನು ಹೇಗೆ ಕೇಳಬೇಕು ಇತ್ಯಾದಿಗಳಲ್ಲಿ ಅವರ ಕಾರ್ಯಕ್ಷಮತೆಯನ್ನು ಹೇಗೆ ಸುಧಾರಿಸಬಹುದು ಎಂಬುದು ತರಬೇತಿ ಕಾರ್ಯಕ್ರಮದ ಉದ್ದೇಶವಾಗಿದೆ. ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಸಂಸದರನ್ನು ಉದ್ದೇಶಿಸಿ ಮಾತನಾಡಲಿದ್ದು, ಪ್ರಧಾನಿ ಮೋದಿ ಅವರು ಭಾನುವಾರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ ಪಿ ನಡ್ಡಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಸಾಮಾಜಿಕ ನ್ಯಾಯ ಸಚಿವ ತಾವರ್ ಚಂದ್ ಗೆಹ್ಲೋಟ್, ಅನುರಾಗ್ ಠಾಕೂರ್, ಗಿರಿರಾಜ್ ಸಿಂಗ್, ಪ್ರಜ್ಞಾ ಸಿಂಗ್ ಠಾಕೂರ್, ರವಿ ಕಿಶನ್, ಗೌತಮ್ ಗಂಭೀರ್ ಸೇರಿದಂತೆ ಪಕ್ಷದ ಇತರ ಮುಖಂಡರು ಹಾಜರಿದ್ದರ