ಪೌರ ನೌಕರರ ಸಂಘದ ಪಧಾದಿಕಾರಿಗಳಿಂದ ತಹಶೀಲ್ದಾರ ರಾಜೇಶ ಬುರ್ಲಿ ಅವರಿಗೆ ಮನವಿ
ಕಾಗವಾಡ, 03 : ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ/ನಗರ ಸ್ಥಳೀಯ ಸಂಸ್ಥೆಗಳಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಪೌರ ನೌಕರರ ಸಂಘದ ಪಧಾದಿಕಾರಿಗಳು ತಹಶೀಲ್ದಾರ ರಾಜೇಶ ಬುರ್ಲಿ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ್ದಾರೆ. ಶುಕ್ರವಾರ ದಿ. 02 ರಂದು ತಹಶಿಲ್ದಾರರ ಕಾರ್ಯಾಲಯ ತರಳಿ ಮನವಿ ಅರ್ಿಸಿದ ಬಳಿಕ ಸಂಘದ ಅಧ್ಯಕ್ಷ ಈರಗೌಡಾ ಪಾಟೀಲ ಮಾತನಾಡಿ, ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ/ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳಾದ ನಗರ ಸ್ಥಳೀಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಘೋಷಿಸುವುದು. ರಾಜ್ಯ ಸರ್ಕಾರಿ ನೌಕರರಿಗೆ ದೊರಕುತ್ತಿರುವ ಸೌಲತ್ತುಗಳಾದ ಕೆಜಿಐಡಿ, ಜಿಪಿಎಫ್, ಜೋತಿ ಸಂಜೀವಿನಿ ಹಾಗೂ ಕರ್ನಾಟಕ ರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸುಮಾರು 20-25 ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ದುಡಿಯುತ್ತಿರುವ ವಾಟರ್‌ಮೆನ್, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ಬೀದಿ ದೀಪ ನಿರ್ವಹಣೆ ಕಾರ್ಮಿಕರು, ಲೋಡರ್ಸ್, ಕ್ಲಿನರ್ಸ್, ಹೆಲ್ಪರ್, ಸ್ಯಾನಿಟರಿ ಸೂಪರವೈಜರ್ ಸೇರಿದಂತೆ ಅನೇಕ ವಿಭಾಗಗಳ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯಿಂದ ಮುಕ್ತಿಗೊಳಿಸಿ, ನೇರ ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಯಡಿ ಪರಿಗಣಿಸುವಂತೆ ಅಲ್ಲದೇ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಮಯದಲ್ಲಿ ದೀಲಿಪ ಕಾಂಬಳೆ, ದಯಾನಂದ ಚವ್ಹಾಣ, ಸುಭಾಷ ತುಪ್ಪಳ, ಮಧುಕರ ಕಾಂಬಳೆ, ಶ್ರೀಮಂತ ಕಾಂಬಳೆ, ಸಾಯಿಲ ಪಾಟೀಲ, ಆಕಾಶ ಧೋಂಡಾರೆ, ಮನಿಷಾ ಕಾಂಬಳೆ ಮಹಮ್ಮದಗಣಿ ಜಮಾದಾರಮ ರಮೇಶ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.