ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ

Attention students and parents

ವಿದ್ಯಾರ್ಥಿಗಳ ಹಾಗೂ ಪೋಷಕರ ಗಮನಕ್ಕೆ 

ಗದಗ 17: ಗದಗ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ/ ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ವಿದ್ಯಾರ್ಥಿಗಳ ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸಹಾಯಕ ಆಯುಕ್ತರ ಕಾರ್ಯಾಲಯದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ.  ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆಯಿರುವ ವಿದ್ಯಾರ್ಥಿಗಳು/ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 08372-238042 ನ್ನು ಸಂಪರ್ಕಿಸಬಹುದಾಗಿದೆ.  ಜಾತಿ ಮತ್ತು ಆದಾಯ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಪಡುವ ಅಗತ್ಯವಿಲ್ಲವೆಂದು   ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.