ಬಳ್ಳಾರಿ: ಬಕ್ರೀದ್ಗೆ ಸೂಕ್ತ ಬಂದೋಬಸ್ತ್

ಲೋಕದರ್ಶನ ವರದಿ

ಬಳ್ಳಾರಿ 07: ಬಕ್ರೀದ್ ಹಬ್ಬವನ್ನು ಅತ್ಯಂತ ಸೌಹಾರ್ದಯುತವಾಗಿ ಆಚರಿಸುವ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಬಂದೋಬಸ್ತ್ ಕೈಗೊಳ್ಳಲು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಳ್ಳತನದಿಂದ ಅನಧಿಕೃತವಾಗಿ ಜಾನುವಾರುಗಳ ಸಾಗಾಟ ತಡೆಗೆ ಜಿಲ್ಲೆಯಲ್ಲಿ 5 ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಬಕ್ರೀದ್ ಹಬ್ಬದ ದಿನ ವಾಹನಗಳ ಮಾರ್ಗಗಳ ಬದಲಾವಣೆಗೆ ನಿರ್ಧರಿಸಲಾಗಿದೆ ಎಂದು ಎಸ್ಪಿ ಸಿ.ಕೆ.ಬಾಬಾ ಅವರು ಸಭೆಗೆ ವಿವರಿಸಿದರು.

ಕಳ್ಳತನದಿಂದ ಅನಧಿಕೃತವಾಗಿ ಸಾಗಾಟ ಮಾಡುವ ಸಂದರ್ಭದಲ್ಲಿ ಜಾನುವಾರುಗಳ ಸಿಕ್ಕರೇ ಅವುಗಳನ್ನು ಗೋಶಾಲೆಗೆ ಕಳುಹಿಸಿ  ಮತ್ತು ಮೇವು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಈದ್ಗಾ ಮೈದಾನದ ಹತ್ತಿರ ಪ್ರಾರ್ಥನಾ ಸಮಯದಲ್ಲಿ ಪಾಕರ್ಿಂಗ್, ಆಸನಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಮಾಡಿ ಎಂದು ಡಿಸಿ ನಕುಲ್ ಅವರು ಸೂಚಿಸಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಡಿವೈಎಸ್ಪಿ ಕೆ.ರಾಮರಾವ್, ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.