ಕೊಪ್ಪಳ 01: ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಶನಿವಾರದಂದು ಕೊಪ್ಪಳ ತಾಲೂಕಿನ ಹನಕುಂಟಿ ಗ್ರಾಮದಲ್ಲಿ ನಡೆಯುತ್ತಿರುವ ``ಬೆಟಗೇರಿ ಏತ ನೀರಾವರಿ ಯೋಜನೆ'' ಕಾಮಗಾರಿಯನ್ನು ವೀಕ್ಷಿಸಿದರು.
ಕಾಮಗಾರಿ ಕಾರ್ಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಕನರ್ಾಟಕ ಸಕರ್ಾರದ ಸಂಸದೀಯ ಕಾರ್ಯದಶರ್ಿ ಹಾಗೂ ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳರವರು ಮಾತನಾಡಿ, ಬೇಟಗೇರಿ ಏತ ನೀರಾವರಿ ಯೋಜನೆಯು ತುಂಗಭದ್ರ ನದಿಯ ಹಿನ್ನೀರಿನಿಂದ ಅಳವಂಡಿ, ಬೆಟಗೇರಿ ಸೇರಿದಂತೆ ವಿವಿದ ಗ್ರಾಮಗಳಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವಂತಹ ಮಹತ್ವದ ಯೋಜನೆ ಇದಾಗಿದೆ. ಶೇ.85 ಕ್ಕೂ ಅಧಿಕ ಪ್ರಮಾಣದಲ್ಲಿ ಕಾಮಗಾರಿಯೂ ಪೂರ್ಣಗೊಂಡಿದೆ. ಒಂದು ತಿಂಗಳ ಬಳಿಕ ಈ ಕಾರ್ಯವು ಸಂಪೂರ್ಣವಾಗಿ ಪೂರ್ಣಗೊಳ್ಳಲಿದೆ. ಯೋಜನೆಯಡಿ ರೈತರ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು, ಅರ್ಹ ರೈತರಿಗೆ ಪರಿಹಾರ ಮೊತ್ತವನ್ನು ಶೀಘ್ರದಲ್ಲಿ ಒದಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ, ರಾಜಶೇಖರ ಹಿಟ್ನಾಳ ಸೇರಿ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.