ಕೊಪ್ಪಳ 10: ಕೊಪ್ಪಳ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಜ. 16 ರಿಂದ 30 ರವರೆಗೆ ಸಂದಿಗ್ದ ಚಲನಚಿತ್ರವನ್ನು ಪ್ರದಶರ್ಿಸಿ ಬಾಲ್ಯ ವಿವಾಹ ತಡೆಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಜಿಲ್ಲೆಯ ಚಿತ್ರಮಂದಿರಗಳ ಮಾಲೀಕರಿಗೆ ತಿಳಿಸಿದರು.
ಬಾಲ್ಯ ವಿವಾಹ ಹಾಗೂ ಬಾಲ ಕಾಮರ್ಿಕತೆಯ ದುಷ್ಪರಿಣಾಮಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಬಗ್ಗೆ ಜಾಗೃತಿ ಮೂಡಿಸಲು ಸಂದಿಗ್ದ ಚಲನಚಿತ್ರ ಪ್ರದರ್ಶನ ಮಾಡುವ ಕುರಿತು ಜಿಲ್ಲೆಯ ಚಿತ್ರಮಂದಿರಗಳ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಜಾಗೃತಿಯನ್ನು ಮೂಡಿಸುವ ಹಿನ್ನೆಲೆಯಲ್ಲಿ ಸಂದಿಗ್ದ ಚಲನಚಿತ್ರವನ್ನು ಜ. 16 ರಿಂದ 30 ರವಗೆ ಪ್ರತಿ ದಿನ ಬೆಳಗ್ಗೆ 09 ರಿಂದ 10-30 ಗಂಟೆಯವರೆಗೆ ಸಂಬಂಧಿಸಿದ ಅಧಿಕಾರಿಗಳು, ವಿದ್ಯಾಥರ್ಿಗಳು, ಶಿಕ್ಷಕರು, ಸಾರ್ವಜನಿಕರ ವೀಕ್ಷಣೆಗಾಗಿ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳ ಮಾಲೀಕರು ತಮ್ಮ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಪ್ರದಶರ್ಿಸಬೇಕು. ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಜಿಲ್ಲೆಯ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಹಾಗೂ ಪ್ರೌಢ ಶಾಲಾ ವಿದ್ಯಾಥರ್ಿಗಳು ಚಿತ್ರ ವೀಕ್ಷಿಸುವಂತೆ ಕ್ರಮ ಕೈಗೊಳ್ಳಬೇಕು. ಚಿತ್ರಮಂದಿರದ ಆಸನಗಳಿಗನುಸಾರವಾಗಿ ಯೋಜನೆ ತಯಾರಿಸಿ, ಮಕ್ಕಳನ್ನು ಸುರಕ್ಷಿತವಾಗಿ ಚಿತ್ರಮಂದಿರಕ್ಕೆ ಕರೆತಂದು "ಸಂದಿಗ್ದ" ಚಲನಚಿತ್ರ ವೀಕ್ಷಿಸಿ ಮರಳಿ ಶಾಲೆಗೆ ತೆರಳುವವರೆಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಸದ್ಯ ಜಿಲ್ಲೆಯಲ್ಲಿ ಪದವಿ ಪೂರ್ವ ವಿದ್ಯಾಥರ್ಿಗಳಿಗೆ ಪರೀಕ್ಷ್ಷೆಗಳು ನಡೆಯುತ್ತಿರುವುದರಿಂದ, ಪದವಿ ಪೂರ್ವ ಕಾಲೇಜು ವಿದ್ಯಾಥರ್ಿಗಳಿಗೆ, ಮೂದಲ ಅವಕಾಶವನ್ನು ನೀಡಬೇಕಾಗಿದ್ದು, ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಜೊತೆಗೊಡಿ ಯೋಜನೆ ತಯಾರಿಸಬೇಕು. ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಡಿ ಇರುವ ಎಲ್ಲಾ ವಸತಿ ಸಹಿತ ಶಾಲಾ ಮಕ್ಕಳು ಸಹ ಈ ಚಲನಚಿತ್ರವನ್ನು ವೀಕ್ಷಿಸಲು ಅನುವಾಗುವಂತೆ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯು ಸೂಕ್ತ ಕ್ರಮಕೈಗೊಳ್ಳಬೇಕು. ಸಂದಿಗ್ದ ಚಲನಚಿತ್ರವನ್ನು ವೀಕ್ಷಿಸಲು ಚಿತ್ರಿಮಂದಿರಕ್ಕೆ ಮಕ್ಕಳ ಆಗಮಿಸುವುದರಿಂದ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಹಾಗೂ ಚಿತ್ರಮಂದಿರಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳುವಂತೆ ಸಹ ಚಿತ್ರ ಮಂದಿರಗಳ ಮಾಲೀಕರು ಅಗತ್ಯ ಕ್ರಮ ವಹಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು, ಗ್ರಾಮ ಲೆಕ್ಕಾಧಿಕಾರಿಗಳು, ಅಂಗನವಾಡಿ ಕಾರ್ಯಕತರ್ೆಯರು ಮತ್ತು ಆಶಾ ಕಾರ್ಯಕತರ್ೆಯರು ಸಂದಿಗ್ದ ಚಲನಚಿತ್ರವನ್ನು ವೀಕ್ಷಿಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಯುನಿಸೆಫ್ ಸಂಯೋಜಕರು ಕ್ರಮವಹಿಸಬೇಕು. ಅಲ್ಲದೇ ಜ. 16 ರಂದು "ಸಂದಿಗ್ದ" ಚಲನಚಿತ್ರದ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿರು ಒಂದು ಚಿತ್ರಮಂದಿರದಲ್ಲಿ ನೇರೆವೆರಿಸಬೇಕು. ಜ. 17 ರಂದು ಗವಿಸಿದ್ದೇಶ್ವರ ಮಠದಿಂದ "ಬಾಲ್ಯ ವಿವಾಹದ ಕುರಿತಾದ ಜಾಗೃತಿ ಜಾಥ"ವನ್ನು ಪ್ರಾರಂಭಿಸಿ ಗಡಿಯಾರಕಂಬ ವೃತ್ತದ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಜಾಗೃತಿ ಜಾಥಾವನ್ನು ಆಯೋಜಿಸಿ, ಸಾಹಿತ್ಯ ಭವನದಲ್ಲಿ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿದ ನಟ/ ನಟಿಯರಿಂದ ಸಂವಾದ ಕಾರ್ಯಕ್ರಮವನ್ನು ನಡೆಸಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಹಾಜರಿದ್ದ ಕೊಪ್ಪಳ ಜಿಲ್ಲೆಯ ಚಲನಚಿತ್ರ ಮಂದಿರಗಳ ಮಾಲೀಕರು "ಸಂದಿಗ್ದ" ಚಿತ್ರವನ್ನು ಉಚಿತವಾಗಿ ಪ್ರದಶರ್ಿಸಲು ಒಪ್ಪಿಗೆ ನೀಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ವೆಂಕಟರಾಜಾ, ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿದರ್ೇಶಕ ಈರಣ್ಣ ಪಂಚಾಳ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿರೇಂದ್ರ ನಾವದಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೇಶಕರಾದ ಉಮಾದೇವಿ ಸೊನ್ನದ, ಪದವಿ ಪೂರ್ವ ಶಿಕ್ಷಣಾ ಇಲಾಖೆಯ ಆರ್. ರಾಟಿಮನಿ, ಯುನಿಸೆಫ್ ಜಿಲ್ಲಾ ಸಂಯೋಜಕ ಹರೀಶ ಜೋಗಿ, ಜಿಲ್ಲಾ ಬಾಲಕಾಮರ್ಿಕ ಯೋಜನಾ ನಿದರ್ೇಶಕ ಬಸವರಾಜ ಹಿರೇಗೌಡರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.