ಕೊಪ್ಪಳ 23: ಮಾರ್ಚ . 05 ರಂದು ದಲಿತ ವಚನಕಾರರ ಜಯಂತಿಯನ್ನು ವಿಜೃಂಭಣೆಯಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಹೇಳಿದರು.
ದಲಿತ ವಚನಕಾರರಾದ ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ದೂಳಯ್ಯ ಮತ್ತು ಉರಿಲಿಂಗ ಪೆದ್ದಿ ಅವರ ಜಯಂತಿಯನ್ನು ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಮಾಚರ್್. 05 ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುವುದು. ವೇದಿಕೆ ಸಮಾರಂಭವು ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಆಯೋಜಿಸಲಾಗುವುದು. ಸಮಾರಂಭದಲ್ಲಿ ದಲಿತ ವಚನಕಾರರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಹಾಜರಾಗಬೇಕು. ಸಮಾರಂಭದಲ್ಲಿ ಶಾಲಾ ಕಾಲೇಜುಗಳ ವಿದ್ಯಾಥರ್ಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೆಶಕ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂತರ್ಿ ದೇಸಾಯಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೇಶಕ ಎಲ್.ಜಿ. ರಾಟಿಮನಿ, ದೈಹಿಕ ಶಿಕ್ಷಣ ಪರಿವೀಕ್ಷಕ ಎ. ಬಸವರಾಜ ಸೇರಿದಂತೆ ವಿವಿದ ಇಲಾಖೆಗಳ ಅಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.