ಗಣರಾಜ್ಯೋತ್ಸವ ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ಹೊನಕೇರಿ ಸೂಚನೆ
ಬೆಳಗಾವಿ 03 : ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ-ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಜ.3) ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜನೇವರಿ- 26 ರಂದು ಜರುಗಲಿರುವ ಗಣರಾಜ್ಯೋತ್ಸವ ದಿನಾಚರಣೆಯನ್ನು ಪ್ರತಿ ವರ್ಷದಂತೆ ಸಂಭ್ರಮದಿಂದ ಆಚರಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ, ಸಂದೇಶವನ್ನು ನೀಡಲಿದ್ದಾರೆ. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರಿ್ಡಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು.ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ 9.00 ಗಂಟೆಯೊಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಿರುವಂತೆ ತಿಳಿಸಿದರು.ವಿಜೃಂಭಣೆಯ ಗಣರಾಜ್ಯೋತ್ಸವ ದಿನಾಚರಣೆಗಾಗಿ ನಗರದ ಎಲ್ಲ ಶಾಲಾ,ಕಾಲೇಜು, ವಸತಿ ನಿಲಯದ ವಿಧ್ಯಾರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಡ್ಡಾಯವಾಗಿ ಕರೆತರುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದ ದಿನದಂದು ಜರುಗಲಿರುವ ಪಥ ಸಂಚಲನ, ಧ್ವಜಾರೋಹಣ, ವೇದಿಕೆ ಸಿದ್ದತೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಸಂಬಂಧಿಸಿದ ಇಲಾಖೆಗಳು ಸಮರ್ಕವಾಗಿ ನಿರ್ವಹಿಸಬೇಕು.
ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದನ್ವಯ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸುವಂತೆ ತಿಳಿಸಿದರು.ಗಣರಾಜ್ಯೋತ್ಸವದ ಪ್ರಯುಕ್ತ ನಗರದ ಪ್ರಮುಖ ವೃತ್ತಗಳನ್ನು ಸ್ವಚ್ಛಗೊಳಿಸಿ ದೀಪಾಲಂಕಾರ ಮಾಡುವಂತೆ ತಿಳಿಸಿದರು.ಕಾರ್ಯಕ್ರಮದಂದು ಜಿಲ್ಲಾ ಕ್ರೀಡಾಂಗಣದಲ್ಲಿ ವೈದ್ಯಕೀಯ ಸಿಬ್ಬಂದಿಗಳ ನಿಯೋಜನೆ ಜತೆಗೆ ಕುಡಿಯುವ ನೀರು ಪೂರೈಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನರ ಹಾಗೂ ಸನ್ಮಾನಿತರಿಗೆ ಸನ್ಮಾನಿಸುವ ಕುರಿತು ಚರ್ಚಿಸಲಾಯಿತು.
ಪ್ಲಾಸ್ಟಿಕ್ ಧ್ವಜ, ಬಂಟಿಂಗ್ಸ್ ನಿಷೇಧ:
ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಗಳ ಮಾರಾಟ ಹಾಗೂ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ. ಸರಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿಯೂ ಸಹ ಪ್ಲಾಸ್ಟಿಕ್ ಧ್ವಜ ಹಾಗೂ ಬಂಟಿಂಗ್ಸ್ ಗಳನ್ನು ಬಳಸದಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು.ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ ಹಾಗೂ ತಾಲೂಕು ಕಚೇರಿಗಳಲ್ಲಿ ಶಿಷ್ಟಾಚಾರದನ್ವಯ ಕಾರ್ಯಕ್ರಮ ಆಯೋಜಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ನಗರ ಸೇವಕರು, ಜಂಟಿ ಕೃಷಿ ನಿರ್ದೆಶಕರಾದ ಶಿವನಗೌಡ ಪಾಟೀಲ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಮಲ್ಲಿಕಾರ್ಜುನ ಕಲಾದಗಿ, ಕ್ರೀಡಾ ಇಲಾಖೆ ಉಪನಿರ್ದೆಶಕ ಬಿ.ಶ್ರೀನಿವಾಸ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೆಶಕಿ ವಿಧ್ಯಾವತಿ ಭಜಂತ್ರಿ, ಗಣ್ಯರುಗಳಾದ ಶ್ರೀನಿವಾಸ ತಾಳೂಕರ, ಆನಂದ ಲೋಕರಿ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಬೆಳಗಾವಿ 03 : 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸಲು ದಿನಾಂಕ:20-01-2025 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಣಣಠಿ://ಛಛಿತಿಜ.ಞಚಿಡಿಟಿಚಿಣಚಿಞಚಿ.ರಠ.ಟಿ ಅಥವಾ ಸಹಾಯವಾಣಿ ಸಂಖ್ಯೆ 8050770004ಗೆ ಸಂಪರ್ಕಿಸಬಹದಾಗಿದೆ ಎಂದ ಪ್ರಕಟಣೆಯಲ್ಲಿ ತಿಳಿಸಿದೆ.
ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಬೆಳಗಾವಿ 03 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಆಯ್ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ಕಾಲ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ದಿನಾಂಕ: 08.01.2025 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆ ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿರಿಯ ಕಲಾವಿದೆ ಯಮುನಾಬಾಯಿ ಕಲಾಚಂದ್ರ ಅವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರದಾನಬೆಳಗಾವಿ 03 : ಜಾನಪದ ಸಣ್ಣಾಟ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸಿರುವ ಚಿಕ್ಕೋಡಿ ತಾಲ್ಲೂಕಿನ ಧುಳಗನವಾಡಿ ಗ್ರಾಮದ ಯಮುನಾಬಾಯಿ ಲಕ್ಷ್ಮಣ ಕಲಾಚಂದ್ರ ಅವರಿಗೆ ರಾಜ್ಯ ಸರಕಾರವು 2024 ನೇ ಸಾಲಿನ "ಕರ್ನಾಟಕ ಸಂಭ್ರಮ-50 ಸುವರ್ಣ ಮಹೋತ್ಸವ ಪ್ರಶಸ್ತಿ" ಯನ್ನು ನೀಡಿ ಗೌರವಿಸಿದೆ.
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಶುಕ್ರವಾರ(ಜ.3) ಯಮುನಾಬಾಯಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಜಾನಪದ ಕಲಾಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಶ್ಲಾಘಿಸಿದ ಸಚಿವರು, ಇವರ ಸೇವೆಯನ್ನು ಗುರುತಿಸಿ ಸರಕಾರವು ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ನೀಡಿದೆ ಎಂದು ಹೇಳಿದರು.
ಅನಿವಾರ್ಯ ಕಾರಣಗಳಿಂದ ನವೆಂಬರ್ 1 ರಂದು ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಯಮುನಾಬಾಯಿ ಅವರು ಪಾಲ್ಗೊಂಡಿರಲಿಲ್ಲ. ಆದ್ದರಿಂದ ಸಚಿವರು ಇಂದು ಪ್ರಶಸ್ತಿ ಪ್ರದಾನ ಮಾಡಿದರು.ಯಕ್ಷಗಾನ ಮತ್ತು ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ 87 ವರ್ಷದ ಯಮುನಾಬಾಯಿ ಕಲಾಚಂದ್ರ ಅವರು, ಜಾನಪದ ಸಣ್ಣಾಟ ಕಲಾವಿದರಾಗಿದ್ದಾರೆ.ಸಂಗ್ಯಾಬಾಳ್ಯಾ, ರಾಧಾನಾಟಕ ಸಣ್ಣಾಟದಲ್ಲಿ ಸ್ತ್ರೀಪಾತ್ರ, ಭಜನಾಪದ, ಸಂಪ್ರದಾಯ ಪದ ಹಾಡುಗಾರಿಕೆಯಲ್ಲಿ ಮೂರು ದಶಕಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದಾರೆ.ಬೆಳಗಾವಿ ಜಿಲ್ಲೆಯಲ್ಲಿ 20 ಅಧಿಕ ಕಲಾತಂಡಗಳಿಗೆ ಸಣ್ಣಾಟ ತರಬೇತಿಯನ್ನು ನೀಡಿರುವ ಇವರು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಜಾನಪದ ಉತ್ಸವಗಳಲ್ಲಿ ಕಲಾಪ್ರದರ್ಶನ ನೀಡಿರುತ್ತಾರೆ.2015-16 ನೇ ಸಾಲಿನ ಕರ್ನಾಟಕ ಯಕ್ಷಗಾನ-ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಗಡಿನಾಡು ಕಲಾರತ್ನ, ಸಣ್ಣಾಟ ರತ್ನ, ದಿ.ಬಾಳಪ್ಪ ಹುಕ್ಕೇರಿ ಪ್ರಶಸ್ತಿ, ಮಾಮವ ಪ್ರಶಸ್ತಿ, ಕನ್ನಡ ಕಲಾಶ್ರೀ ಪ್ರಶಸ್ತಿಗಳನ್ನು ಯಮುನಾಬಾಯಿ ಕಲಾಚಂದ್ರ ಅವರು ಪಡೆದುಕೊಂಡಿರುತ್ತಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಚ್.ಚನ್ನೂರ, ಉಪ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಕಲಾವಿದರಾದ ಭರತ್ ಕಲಾಚಂದ್ರ, ಮಾರುತಿ ಕಾಮಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.