ಧಾರವಾಡ30: ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದಶರ್ಿಗಳಾಗಿರುವ ಹಿರಿಯ ಐಎಎಸ್ ಅಧಿಕಾರಿ ವಿ. ಮಂಜುಲ ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಜರುಗಿಸಿದರು.
ಸಭೆಯಲ್ಲಿ ಕೃಷಿ, ತೋಟಗಾರಿಕೆ, ಕುಡಿಯುವ ನೀರು, ಪಶುಸಂಗೋಪನೆ, ರೇಷ್ಮೆ, ಎಂ.ಜಿ.ಎನ್.ಆರ್.ಇ.ಜಿ.ಎ. ಸ್ವಚ್ಛಭಾರತ ಮಿಷನ್, ಮೇವು ಬ್ಯಾಂಕ್, ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ, ರೈತರ ಆತ್ಮಹತ್ಯೆ ಪ್ರಕರಣ, ಸಾಮಾಜಿಕ ಭದ್ರತಾ ಯೋಜನೆ, ಪೋಡಿ ಪ್ರಕರಣ, ಅರಣ್ಯ ಹಕ್ಕು ಕಾಯ್ದೆಯಡಿ ಅಜರ್ಿಗಳು, ಕಂದಾಯ ಹಾಗೂ ಪಿಂಚಣಿ ಅದಾಲತ್, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಯೋಜನೆ, ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆ, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕೌಶಲ್ಯಾಭಿವೃದ್ಧಿ ಇಲಾಖೆ, ವಿವಿಧ ಇಲಾಖೆಗಳ ವಸತಿ ನಿಲಯ, ವಿವಿಧ ಯೋಜನೆಗಳಡಿ ವಸತಿ ನಿಮರ್ಾಣ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಯೋಜನೆ ಕಾರ್ಯಗಳ ಅನುಷ್ಠಾನದ ಕುರಿತು ಉಸ್ತುವಾರಿ ಕಾರ್ಯದಶರ್ಿಗಳು ಪ್ರಗತಿ ವಿವರ ಪಡೆದರು.
ಮುಂಗಾರು ಆರಂಭವಾಗಿರುವುದರಿಂದ ಕೃಷಿ, ತೋಟಗಾರಿಕೆ ಇಲಾಖೆಗಳು ರೈತರಿಗೆ ಅಗತ್ಯವಿರುವ ಬೀಜ ಗೊಬ್ಬರ ಪೂರೈಕೆಗೆ ಸನ್ನದ್ಧವಾಗಿರಬೇಕು. ಮತ್ತು ಬರಗಾಲದ ಮುಂದುವರಿಕೆ ಆಗಿರುವುದರಿಂದ ನಗರ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ಉದ್ಯೋಗದ ಕೊರತೆ ಆಗದಂತೆ ಕ್ರಮ ವಹಿಸಬೇಕು. ತಹಶೀಲ್ದಾರಗಳು ತಮ್ಮ ತಾಲೂಕಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ 24 ಗಂಟೆಯಲ್ಲಿ ಪರಿಹರಿಸಬೇಕೆಂದು ಅವರು ಹೇಳಿದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್ ಅಭಿವೃದ್ಧಿ ಕಾಮಗಾರಿಗಳ ಕುರಿತು ಪೂರಕ ಮಾಹಿತಿ ಹಾಗೂ ವಿವರಣೆಯನ್ನು ಉಸ್ತುವಾರಿ ಕಾರ್ಯದಶರ್ಿಗಳಿಗೆ ನೀಡಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಪ್ರಶಾಂತಕುಮಾರ್ ಮಿಶ್ರಾ, ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ವೇದಿಕೆಯಲ್ಲಿದ್ದರು. ಸಭೆಯಲ್ಲಿ ಸಕರ್ಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿ ತಮ್ಮ ಇಲಾಖೆಗಳ ಪ್ರಗತಿ ವರದಿ ನೀಡಿದರು.