ಡಾ. ಬಾಬು ಜಗಜೀವನರಾಮ್ ಪುಣ್ಯತಿಥಿ ಆಚರಣೆ

ಲೋಕದರ್ಶನ ವರದಿ

ಗದಗ 06: ಗದಗ ಜಿಲ್ಲಾಡಳಿತದ ಮುಖ್ಯ ಸಭಾಂಗಣದಲ್ಲಿಂದು ಗದಗ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ್ ರಾಮ ಅವರ 33ನೇ ಪುಣ್ಯ ತಿಥಿಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬಾಬು ಜಗಜೀವನ್ ರಾಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಿ  ಗೌರವವನ್ನು ಸಲ್ಲಿಸಿದರು. ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಶ್ರೀನಾಥ ಜೋಶಿ, ಜಿ.ಪಂ. ಮುಖ್ಯ ಕಾರ್ಯನಿವಾಹಣಾಧಿಕಾರಿ ಮಂಜುನಾಥ ಚವ್ಹಾಣ, ಸಮಾಜ ಕಲ್ಯಾಣ ಇಲಾಖೆ ಉಪನಿದರ್ೇಶಕ ಖಾಜಾ ಹುಸೇನ ಮುಧೋಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.