ಲೋಕದರ್ಶನ ವರದಿ
ಸಾಹಿತ್ಯದ ಮೂಲಕ ಬಡಿದೆಚ್ಚರಿಸಿದ ಅಜಾನುಬಾಹು ವ್ಯಕ್ತಿತ್ವದ ಡಾ. ಶಿವರಾಮ ಕಾರಂತರು ಸರ್ವಕಾಲಿಕ ಸರ್ವಮಾನ್ಯ ಕವಿಯಾಗಿದ್ದಾರೆ : ಡಾ.ಬಿ.ಎಸ್.ಶಿವಕುಮಾರ
ಹಾವೇರಿ 21: ಹಲವು ಆಯಾಮಗಳಲ್ಲಿ ನಾಡಿನ ಕ್ಲಿಷ್ಟತೆಗಳನ್ನು ಸ್ಪಷ್ಟ ರೀತಿಯಲ್ಲಿ ಸಾಹಿತ್ಯದ ಮೂಲಕ ಬಡಿದೆಚ್ಚರಿಸಿದ ಅಜಾನುಬಾಹು ವ್ಯಕ್ತಿತ್ವದ ಡಾ. ಶಿವರಾಮ ಕಾರಂತರು ಸರ್ವಕಾಲಿಕ ಸರ್ವಮಾನ್ಯ ಕವಿಯಾಗಿದ್ದಾರೆ ಎಂದು ಆಂಧ್ರ್ರದೇಶ ಕುಪ್ಪಂ ದ್ರಾವಿಡ ವಿಶ್ವವಿದ್ಯಾಲಯದ ತುಳು ಅಧ್ಯಯನ ಪೀಠದ ಪ್ರಾಧ್ಯಾಪಕ ಡಾ.ಬಿ.ಎಸ್.ಶಿವಕುಮಾರ ಹೇಳಿದರು. ನಗರದ ಕೆಎಲ್ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಉಡುಪಿ ಡಾ. ಶಿವರಾಮ ಕಾರಂತ ಟ್ರಸ್ಟ್, ಶಿಗ್ಗಾಂವಿ ಗೌರಮ್ಮ ಬ.ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಐಕ್ಯೂಎಸಿ ಹಾಗೂ ಕನ್ನಡ ವಿಭಾಗಗಳ ಜಂಟಿ ಆಯೋಜಕತ್ವದಲ್ಲಿ ಏರಿ್ಡಸಿದ್ದ ಡಾ.ಶಿವರಾಮ ಕಾರಂತರ ಬರಹಗಳು: ಸಮಕಾಲಿನ ಚಿಂತನೆ ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರು ವೈಜ್ಞಾನಿಕ ಮತ್ತು ವೈಚಾರಿಕ ದೃಷ್ಟಿಕೋನವನ್ನಿಟ್ಟುಕೊಂಡು ಹದವಾಗಿ ಮೆದುವಾಗಿ ಕಾವ್ಯಗಳನ್ನು ರಚಿಸಿದ ಮಹಾನ್ ಕವಿ. ಕಡಲ ತೀರದಿಂದ ನಾಡಿನ ಓದುಗರ ಒಡಲಿಗೆ ಅಕ್ಷರದ ಸಾಗರವನ್ನೇ ಹರಿಸಿದ ಧೀಮಂತಿಕೆಯ ಚಿಂತಕರು. ಆಡು ಮುಟ್ಟದ ಸೊಪ್ಪಿಲ್ಲ ಕಾರಂತರು ಬರೆಯದ ಸಾಹಿತ್ಯ ಪ್ರಾಕಾರವಿಲ್ಲ ಎಂಬಂತೆ ಸಾಹಿತ್ಯದಲ್ಲಿ ಉತ್ತಮ ಉದಾತ್ತ ಕೃಷಿಗೈದು ಹೆಸರಾದವರು.ಇನ್ನಷ್ಟು ವಿಸ್ತೃತ ರೀತಿಯ ಸಂಕಿರಣಗಳು ಅಲ್ಲಲ್ಲಿ ಏರ್ಪಟಟು ಕನ್ನಡ ನಾಡಿನ ಜ್ಞಾನಪೀಠದ ರತ್ನ ಎಲ್ಲೆಡೆಗೂ ಹೊಳೆಯಲಿ ಎಂದರು. ಡಾ.ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ ಎಲ್ಲಾ ಕಾಲಕ್ಕೂ,ಎಲ್ಲಾ ಸಂದರ್ಭಕ್ಕೂ ಅನ್ವಯವಾಗುವ ಕವಿ ಡಾ.ಶಿವರಾಮ ಕಾರಂತರಾಗಿದ್ದಾರೆ.ಸಣ್ಣ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಸಾಹಿತ್ಯ ಪ್ರತಿಭೆ ಇಂದು ವಿಶ್ವಮಟ್ಟದಲ್ಲಿ ಬೆಳೆದು ನಿಂತು ಕನ್ನಡ ನಾಡಿನ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ.ಅವರನ್ನು ಅದ್ಭುತ ಚಮತ್ಕಾರಿ ವ್ಯಕ್ತಿತ್ವ ಎಂದು ಬಣ್ಣಿಸಿದರು. ಹಲವು ಸಂಶೋಧನಾತ್ಮಕ ಲೇಖನಮಾಲೆಗಳುಳ್ಳ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು.ಟ್ರಸ್ಟ್ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ ಹಾಗೂ ಅಧ್ಯಕ್ಷತೆವಹಿಸಿದ್ದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೊಳ್ಳಿ ಮಾತನಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜು ಸ್ಥಾನಿಕ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಡಾ. ಎಸ್. ಎಲ್. ಬಾಲೇಹೊಸೂರು, ಮಂಡಳಿಯ ಸದಸ್ಯ ಜೆ.ಎಸ್.ಅರಣಿ, ಕುಂದಾಪುರ ಬಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ರೇಖಾ ಬನ್ನಾಡಿ, ಪ್ರಾಚಾರ್ಯೆ ಡಾ. ಸಂಧ್ಯಾ ಆರ್. ಕುಲಕರ್ಣಿ, ಶಿಗ್ಗಾಂವಿ ಸ.ಪ್ರ.ದ. ಕಾಲೇಜಿನ ಪ್ರಾಂಶುಪಾಲ ಡಾ.ಎ.ಸಿ. ವಾಲಿ,ಡಾ.ಜೆ.ಎಫ್. ಹೊಸಮನಿ, ಶ್ರೀದೇವಿ ದೊಡ್ಡಮನಿ, ಡಾ. ಆನಂದ ಇಂದೂರ ಹಾಗೂ ಡಾ. ಶಮಂತಕುಮಾರ್ ಕೆ. ಎಸ್.ವಿವಿಧ ಕಾಲೇಜುಗಳ ಉಪನ್ಯಾಸಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.