ಮಹಿಳೆಯರಿಗೆ ಹಾಗೂ ಪುರುಷರಿಗೆ ವಾಹನ ಚಾಲನಾ ತರಬೇತಿ

Driving training for women and men

 ಮಹಿಳೆಯರಿಗೆ ಹಾಗೂ ಪುರುಷರಿಗೆ ವಾಹನ ಚಾಲನಾ ತರಬೇತಿ  

      ಬಳ್ಳಾರಿ 24: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಸಹಯೋಗದೊಂದಿಗೆ ಮಹಿಳೆಯರಿಗೆ ನಾಲ್ಕು ಚಕ್ರದ ವಾಹನ ಚಾಲನಾ ತರಬೇತಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಗೀರೀಶ್ ವಿ ಕುಲಕರ್ಣಿ, ಜಿಲ್ಲಾ ಮಾರ್ಗದರ್ಶಿ ವ್ಯವಸ್ಥಾಪಕರು, ಕೆನರಾ ಬ್ಯಾಂಕ್ ಬಳ್ಳಾರಿ ಇವರು  ಈ ಕಾರ್ಯಕ್ರವನ್ನು ಉದ್ದೇಶಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಾಹನಕ್ಕೆ ವಾಹನ ಚಾಲಕಿಯರನ್ನಾಗಿ ಸ್ವ ಸಹಾಯ ಗುಂಪಿನ ಮಹಿಳೆಯರನ್ನು ಆಯ್ಕೆ ಮಾಡಲಾಗಿದ್ದು, ನೀವು ದೈರ್ಯದಿಂದ ಹೆದರದೆ ವಾಹನ ಚಲಾವಣೆ ಮಾಡುವಲ್ಲಿ ಆಸಕ್ತಿ ವಹಿಸಿ ಕಲಿಯಬೇಕು, ಮಹಿಳೆಯರಿಗೆ ಸಮಾನತೆ ಇದ್ದು, ವಿವಿಧ ಸರ್ಕಾರದ ಯೋಜನೆಗಳು ಜಾರಿಯಾಗುತ್ತಿವೆ.  

ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಆಸಕ್ತಿ ವಹಿಸಿ, ಒಂದು ಹೆಚ್ಚೆ ಮುನ್ನೆಡೆಯಲು ಕರೆ ನೀಡಿದರು. ಯುವಕರು  ಸಹ ಪ್ಯಾಷನಗಾಗಿ ಕಲಿಯುವ ಬದುಲು ಜೀವನ ನಿರ್ವಹಣೆಗಾಗಿ ಲಘು ವಾಹನಾ ಚಾಲನೆಯನ್ನು ಸ್ವ-ಉದ್ಯೋಗವನ್ನಾಗಿ ಮಾಡಿಕೊಳ್ಳಿ ಎಂದು ತಿಳಿಸಿದರು. ಪ್ರಸ್ತಾವಿಕವಾಗಿ ರಾಜೇಂದ್ರ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್ ಬಳ್ಳಾರಿ ಇವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಹಿಳೆಯರ ಪಾತ್ರ ಬಹು ಮುಖ್ಯವಾಗಿದೆ ಎಂದು ತಿಳಿಸುತ್ತಾ, ಈಗಿನ ಕಾಲದಲ್ಲಿ ಮಹಿಳೆಯರಿಗೆ ತುಂಬಾ ಅವಕಾಶಗಳಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 


ಈ ಸಂದರ್ಭದಲ್ಲಿ ವಿಜಯ ಕುಮಾರ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಪಂಚಾಯತ್ ಬಳ್ಳಾರಿ ಜಡೇಶ ಉಪನ್ಯಾಸಕರು.   ದಿನೇಶ ಕುಮಾರ ಉಪನ್ಯಾಸಕರು. ಸಿದ್ದಲಿಂಗಮ್ಮ, ಸಂತೋಷ ಕುಮಾರ, ಉಪಸ್ಥಿತರಿದ್ದರು, ಬಳ್ಳಾರಿ ಜಿಲ್ಲೆಯ 31 ಜನ ಶಿಭಿರಾರ್ಥಿಗಳು ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.