ಬೆಂಗಳೂರು, ಜು 28 ರಾಜ್ಯದಲ್ಲಿ ಹೊಸದಾಗಿ ಅಧಿಕಾರ ಸೂತ್ರ ಹಿಡಿದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮುಂದಿನ ಮೂರೂವರೆ ವರ್ಷಗಳ ಕಾಲ ಸ್ವಚ್ಛ, ಸುಭದ್ರ ಆಡಳಿತ ನೀಡಲಿದೆ ಎಂದು ಪಕ್ಷದ ಮುಖಂಡ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೇಂದ್ರ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಗೆ ಪೂರಕವಾಗಿ ವಾರ್ಷಿಕ 4 ಸಾವಿರ ಹೆಚ್ಚುವರಿ ಹಣ ಪಾವತಿ ಮಾಡುವುದಾಗಿ ಹೇಳಿಕೆ ರೈತರ ಪರ ಹೆಚ್ಚಿನ ಕಾಳಜಿ ತೋರಿದ್ದಾರೆ.
ಇದಲ್ಲದೇ ನನೆಗುದಿಗೆ ಬಿದ್ದಿರುವ ಹಲವಾರು ನೀರಾವರಿ ಯೋಜನೆಗಳು, ಬರಗಾಲ ಪೀಡಿತ ತಾಲೂಕುಗಳಿಗೆ ಹೆಚ್ಚು ಆದ್ಯತೆ ನೀಡಲು ಸರಕಾರ ಇಚ್ಛಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ರಸ್ತೆಗಳೂ ಸೇರಿದಂತೆ, ಮೂಲಭೂತ ಸೌಕರ್ಯಗಳು, ಕರಾವಳಿ ಪ್ರದೇಶದ ಮೀನುಗಾರಿಕೆಗೆ ಬಂದರುಗಳು, ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ, ಪಂಗಡಗಳಿಗೆ ಬೇಕಾದ ಮೂಲಭೂತ ಸೌಕರ್ಯ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ ಎಂದರು.