ಮಲ್ಲಿಕಾರ್ಜುನ ವಿದ್ಯಾಲಯ ವಿದ್ಯಾರ್ಥಿಗಳ ಉತ್ತಮ ಸಾಧನೆ
ಕಾಗವಾಡ 03: ಪಟ್ಟಣದ ಮಲ್ಲಿಕಾರ್ಜುನ ವಿದ್ಯಾಲಯದ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಋತಿಕ ಲಾಂಡಗೆ. 586 (ಶೇ.93.76) ಶಾಲೆಗೆ ಪ್ರಥಮ, ಸೌರಭ ಕೊಲ್ಲಾಪುರೆ 578 (ಶೇ.92.48) ದ್ವಿತೀಯ ಮತ್ತು ನಿಖಿತಾ ತೇಲಿ 559 (ಶೇ.89.44) ಅಂಕದೊಂದಿಗೆ ತೃತೀಯ ಸ್ಥಾನ ಪಡೆದುಕೊಂಡು, ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಜ್ಯೋತಿಕುಮಾರ ಪಾಟೀಲ, ಮುಖ್ಯೋಪಾಧ್ಯಾಯ ಆರ್.ಟಿ. ಗುರವ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ಸಮಸ್ತ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.