ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಈ ಸಲವೂ ವಿದ್ಯಾರ್ಥಿನೀಯರ ಮೇಲುಗೈ
ಬೆಟಗೇರಿ, 03: ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.85.94ರಷ್ಟು ಫಲಿತಾಂಶದ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿ ಕುಮಾರಿ ರೂಪಾ ಕುರಬೇಟ 609(ಶೇ.97.42)ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆೆ.
ಸವಿತಾ ಮುಧೋಳ 606(ಶೇ.96.96) ಅಂಕ ಪಡೆದು ದ್ವಿತೀಯ ಸ್ಥಾನ, ಕಾವ್ಯ ಮುರಗೋಡ 595( ಶೇ.95.02) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ, ಶಿಕ್ಷಕ ವೃಂದ ಹಾಗೂ ಎಸ್‌ಡಿಎಮ್‌ಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಣಪ್ರೇಮಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆಗೈದ ಶಾಲೆಯ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.