ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್‌.ಕೆ.ಪಾಟೀಲ ಚಾಲನೆ ಗುಣಮಟ್ಟದ ಕಾಮಗಾರಿಗೆ ಆದ್ಯತೆಯಿರಲಿ

For road development work, Minister HK Patil should give priority to driving quality work

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್‌.ಕೆ.ಪಾಟೀಲ ಚಾಲನೆ ಗುಣಮಟ್ಟದ ಕಾಮಗಾರಿಗೆ ಆದ್ಯತೆಯಿರಲಿ 


ಗದಗ 27: ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ ಗದಗ ತಾಲೂಕಿನ ಹಿರೇಹಂದಿಗೋಳ ರಸ್ತೆ ಕಿ.ಮೀ 6.7ರಿಂದ 10 ರವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಎಚ್‌.ಕೆ.ಪಾಟೀಲ ಸೋಮವಾರ  ಭೂಮಿ ಪೂಜೆ ನೆರವೇರಿಸಿದರು.  

ನಂತರ ಮಾತನಾಡಿದ ಅವರು ರಸ್ತೆ ಅಭಿವೃದ್ಧಿಗೆ 167 ಲಕ್ಷ ರೂ.ಗಳ ಅನುದಾನ ಒದಗಿಸಲಾಗಿದ್ದು ಮುಂದಿನ ಮೂರು ತಿಂಗಳೊಳಗಾಗಿ ರಸೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  

ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ ವಹಿಸಬೇಕು. ಆರೋಪಗಳಿಗೆ ಅವಕಾಶವಿಲ್ಲದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಸರಿಯಾಗಿ ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕೆಂದು ರಾಜ್ಯದ ಕಾನೂನು, ನ್ಯಾ0ು ಮತ್ತು ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ.ಪಾಟೀಲ ಅವರು ತಿಳಿಸಿದರು.  

ಈ ಸಂದರ್ಭದಲ್ಲಿ  ಗದಗ ಬೆಟಗೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾದಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಪ್ರಭು ಬುರಬುರೆ, ನಗರಸಭೆ ಸದಸ್ಯರುಗಳಾದ ಚಿಮ್ಮಿ ನದಾಫ್ , ರವಿ ಕಮತರ, ಲಕ್ಷ್ಮೀ ಸಿದ್ಧಮ್ಮನಹಳ್ಳೀ, ಲಲಿತಾ ಅಸೂಟಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ನಗರಸಭೆ ಪೌರಾಯುಕ್ತ ಮಹೇಶಪೋತದಾರ , ಇಂಜನೀಯರ್ ಹುಚ್ಚೇಶ್ವರ ಬಂಡಿವಡ್ಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ  ಉಪನಿರ್ದೇಶಕಿ ಪದ್ಮಾವತಿ ಜಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.