ಗದಗ: ಕ್ರೀಡಾಪಟುಗಳಿಂದ ಕಬ್ಬಡ್ಡಿ ಪಂದ್ಯಾವಳಿಗಳು: ಮತದಾನ ಕುರಿತು ಜಾಗೃತಿ

ಗದಗ 30: ಕೇಂದ್ರ ಚುನಾವಣಾ ಆಯೋಗದ ನಿದರ್ೇಶನದ ಅನ್ವಯ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರ ಅಂಗವಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿಂದು(ದಿ.30)ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೇಶಕರಾದ ಬಿ.ಬಿ ವಿಶ್ವನಾಥ, ಡಿ.ಎಸ್. ತಳವಾರ, ಶಿಕ್ಷಕರು ಹಾಗೂ ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ,  ಎಂ.ಎಸ್. ಕುಚಬಾಳ, ಸಹಾಯಕ ಯುವಜನ ಸೇವಾ ಮತ್ತು ಕ್ರೀಡಾಧಿಕಾರಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರುಗಳು ಸಂಘಟಿಸಿದ ಈ ಪಂದ್ಯಾವಳಿಗಳಲ್ಲಿ ತಾಲೂಕಿನ ವಿವಿಧ ಕ್ರೀಡಾಪಟುಗಳು ಭಾಗವಹಿಸಿದ್ದರು. ಪಂದ್ಯಾವಳಿಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಿ ಪಂದ್ಯಾವಳಿಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತದಾನ ಜಾಗೃತಿ ಮೂಡಿಸಿ ತಪ್ಪದೇ ಮತ ಚಲಾಯಿಸಿ ತಮ್ಮ ಅವಲಂಬಿತರಿಗೂ ಕೂಡ ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಲು ಕೋರಲಾಯಿತು.