ಗದಗ : ಮತದಾರರ ಜಾಗೃತಿಗೆ ತ್ರಿ ಚಕ್ರ ವಾಹನ ಜಾಥಾ

ಗದಗ 29: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾರರ ಪಟ್ಟಿಯಲ್ಲಿರುವ ಅರ್ಹ ಮತದಾರರು ತಪ್ಪದೇ ಮತದಾನ ಮಾಡುವಂತೆ ಹಾಗೂ   ಸಾರ್ವಜನಿಕರಿಗೆ ಮತದಾನ ಜಾಗೃತಿಯ ಅರಿವನ್ನು ಮೂಡಿಸಲು ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಹಿರಿಯ ನಾಗರಿಕ ಹಾಗೂ ವಿಕಲಚೇತನ ಇಲಾಖೆಯಿಂದ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಮತದಾನದ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು. ಇದೇ ಸಂದರ್ಭದಲ್ಲಿ ಜಿ.ಪಂ ಸ್ವೀಪ್ ಸಮಿತಿಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಚವ್ಹಾಣ, ಜಿ.ಪಂ ಸ್ವೀಪ್ ಸಮಿತಿಯ ಸದಸ್ಯ ಕಾರ್ಯದಶರ್ಿ ಟಿ.ದಿನೇಶ,   ರೋಣ ತಾಲೂಕು ಕಾರ್ಯನಿರ್ವಹಣಾಧಿಕಾರಿ  ಎಂ.ವಿ. ಚಳಗೇರಿ, ಬಸವರಾಜ ಒಲಿ ಇತರರು ಇದ್ದರು.