ಸಾಮಾಜಿಕ ಅಂತರದೊಂದಿಗೆ ಅಗತ್ಯ ವಸ್ತು-ಪಡಿತರ ಪಡೆಯಿರಿ: ಜಿಲ್ಲಾಧಿಕಾರಿ ಪಾಟೀಲ

ವಿಜಯಪುರ 08 : ಜಿಲ್ಲೆಯಾದ್ಯಂತ ಪಡಿತರ ಅಕ್ಕಿ ಹಾಗೂ ಗೋಧಿಯನ್ನು ಹಂಚಿಕೆಯನ್ನು ಆರಂಭಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಪಡೆಯುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ಮನವಿ ಮಾಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್-19 ಕುರಿತು ಅಧಿಕಾರಿಗಳೊಂದಿಗೆ ಮುನ್ನೆಚ್ಚರಿಕಾ ಸಭೆ ನಡೆಸಿದ ಅವರು ಜಿಲ್ಲೆಯಾದ್ಯಂತ ಪಡಿತರ, ತರಕಾರಿ ಮತ್ತು ಹಣ್ಣು, ಮೀನು ಸೇರಿದಂತೆ ಅಗತ್ಯ ವಸ್ತುಗಳ ಖರೀದಿ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ ನಿಯಮ ಪಾಲಿಸಬೇಕು. ಅದರಂತೆ ಎ.ಪಿ.ಎಮ್.ಸಿ ವ್ಯಾಪ್ತಿಯಲ್ಲಿಯೂ ಮೈಕ್ ಅನೌನ್ಸ್ಮೆಂಟ್ ಮೂಲಕ ಸಾಮಾಜಿಕ ಅಂತರದೊಂದಿಗೆ ಚಟುವಟಿಕೆಗಳನ್ನು ನಡೆಸಬೇಕು. ರೈತರು ಸೇರಿದಂತೆ ವ್ಯಾಪಾರಸ್ಥರು ಮಾಸ್ಕ್ ಧರಿಸುವ ಮೂಲಕ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಾದ್ಯಂತ ಕಂಟಿನ್ಜನ್ಸಿ ಪ್ಲ್ಯಾನ್ರನ್ವಯ ಕೋವಿಡ್ ಆಸ್ಪತ್ರೆ, ಫೀವರ್ ಆಸ್ಪತ್ರೆ ಸೇರಿದಂತೆ ಇನ್ನಿತರ ಅವಶ್ಯಕ ಕ್ರಮಗಳನ್ನು ನಿಗದಿತ ಅವಧಿಯೊಳಗೆ ಸಿದ್ಧಪಡಿಸಬೇಕು. ಒಂದು ವೇಳೆ ಪಾಸಿಟಿವ್ ಪ್ರಕರಣಗಳು ಕಂಡು ಬಂದಲ್ಲಿ ಸರ್ಕಾರದ ನಿರ್ದೇಶನದನ್ವಯ ಶೇಕಡಾವಾರು ಪ್ರಮಾಣದ ಮೇಲೆ ಕೈಗೊಳ್ಳಬೇಕಾದ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.

ಅದರಂತೆ ದ್ರಾಕ್ಷಿ ಆನ್ಲೈನ್ ಟ್ರೇಡಿಂಗ್ಗೆ ತಕ್ಷಣ ಕ್ರಮಕೈಗೊಳ್ಳಬೇಕು. ಡಿಪ್ಪಿಂಗ್ ಆಯಿಲ್ಗೆ ಸಂಬಂಧಿಸಿದಂತೆ ಸಂಬಂಧಪಟ್ಟ ರಾಜ್ಯಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆ ಪರಿಹರಿಸಬೇಕು. ಯಲಗೂರ ಗೋಶಾಲೆಯಲ್ಲಿರುವ ಮೂನ್ನೂರು ಜಾನುವಾರುಗಳಿಗೆ ಮೇವು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಪಶುಸಂಗೋಪನೆ ಇಲಾಖೆ ಉಪನಿದರ್ೇಶಕರಿಗೆ ಸೂಚಿಸಿ ಜಿಲ್ಲೆಯಾದ್ಯಂತ ಮೀನು ಮಾರಾಟಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ. ಪಾರ್ಸಲ್ ಪಡೆಯಲು ಮಾತ್ರ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ 47 ಕಡಲೆ ಖರೀದಿ ಕೇಂದ್ರ ಆರಂಭಿಸಬೇಕಾಗಿದ್ದು ಈ ಪೈಕಿ 10 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಬಾಕಿ ಉಳಿದ ಖರೀದಿ ಕೇಂದ್ರಗಳನ್ನು ತಕ್ಷಣ ಆರಂಭಕ್ಕೆ ಕ್ರಮಕೈಗೊಳ್ಳಬೇಕು. ತೊಗರಿಯನ್ನು ಈಗಾಗಲೇ 79 ಸಾವಿರ ರೈತರಿಂದ ಖರೀದಿಸಲಾಗಿದ್ದು, ಬಾಕಿ ಉಳಿದ ರೈತರ ತೊಗರಿಯನ್ನು ಸಹ ಖರೀದಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯ ಮತ್ತು ಅಗತ್ಯವಲ್ಲದ ವಸ್ತುಗಳಿಗೆ ಹಾಗೂ ನಗರದ ಆಂತರಿಕಗಳಲ್ಲಿ ಅಗತ್ಯ ವಸ್ತುಗಳ ಸಾಗಾಣಿಕೆ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಾದ್ಯಂತ ಕಳ್ಳಬಟ್ಟಿ ತಯಾರಿಕೆ ನಿಯಂತ್ರಣಕ್ಕೆ 283 ಕಡೆಗಳಲ್ಲಿ ದಾಳಿ ಮಾಡಲಾಗಿ 18 ಪ್ರಕರಣಗಳನ್ನು ದಾಖಲಿಸಲಾಗಿದೆ. ಲಾಕ್ಡೌನ್ ನಂತರ 4 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಪೊಲೀಸ್ ಮತ್ತು ಅಬಕಾರಿ ಇಲಾಖೆಗಳ ಮೂಲಕ ಇದರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವದಂತಿ ಹಬ್ಬಿಸುವವರ ವಿರುದ್ಧ ನಿದರ್ಾಕ್ಷಿಣ್ಯ ಕ್ರಮಕೈಗೊಳ್ಳಲಾಗುತ್ತದೆ. ಕೊರೋನಾ ನಿಯಂತ್ರಣ ಹೋರಾಟದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದ್ದು ಮಾಧ್ಯಮ ಪ್ರತಿನಿಧಿಗಳು ಈವರೆಗೆ ಸಹಕರಿಸಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ ಅವರು ಸಾಮಾಜಿಕ ಜಾಲತಾಣಗಳಲ್ಲಿ ಬರುವಂತಹ ವದಂತಿಗಳ ಬಗ್ಗೆಯೂ ಮಾಹಿತಿ ನೀಡಿ ಸಹಕರಿಸಬೇಕು. ಜಾಲತಾಣಗಳಲ್ಲಿ ಅವಹೇಳಕಾರಿಯಾದ ವಿಡಿಯೋಗಳನ್ನು, ಆಡಿಯೋಗಳನ್ನು ಹಂಚಿಕೆ ಮಾಡಿಕೊಳ್ಳದಂತೆ ತಿಳಿಸಿರುವ ಅವರು ತಪ್ಪಿತಸ್ಥರ ವಿರುದ್ಧ ನಿದರ್ಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುವ ಶಬ್-ಎ-ಬರಾತ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಲಾಗಿದೆ. ಕೋವಿಡ್-19 ಅಪಾಯ ಇರುವ ಹಿನ್ನೆಲೆಯಲ್ಲಿ ಎಲ್ಲರೂ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕಾದ ಅವಶ್ಯಕತೆಯಿದ್ದು, ಮಸೀದಿ ಹಾಗೂ ಮುಸ್ಲಿಂ ಖಬ್ರಸ್ಥಾನಗಳಿಗೆ ಪ್ರಾರ್ಥನೆಗಾಗಿ ಹೋಗದೆ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸುವ ಮೂಲಕ ಸೂಕ್ತ ಜಾಗೃತಿ ವಹಿಸಿಕೊಳ್ಳುವಂತೆ ಅವರು ಸಲಹೆ ನೀಡಿದರು.

ಇಂದು ಪುವರ್ಾಹ್ನವರೆಗೆ ಜಿಲ್ಲೆಗೆ ವಿದೇಶ ಮತ್ತು ಇತರೆ ಪ್ರದೇಶಗಳಿಂದ ಬಂದ 420 ಜನರ ಮೇಲೆ ತೀವ್ರ ನಿಗಾ ಇಡಲಾಗಿದೆ. 216 ಜನ 28 ದಿನಗಳ ಅವದಿ ಪೂರ್ಣಗೊಳಿಸಿದ್ದು, 172 ಜನರು 15 ರಿಂದ 28 ದಿನಗಳ ರೀಪೋಟರ್ಿಂಗ್ ಅವಧಿಯಲ್ಲಿದ್ದಾರೆ. ಈವರೆಗೆ ಕಳುಹಿಸಲಾದ 61 ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿಯಲ್ಲಿ 59 ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಬಾಕಿ 2 ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಂದ್ರ ಕಾಪ್ಸೆ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ.ಮುಕುಂದ ಗಲಗಲಿ, ಜಿಲ್ಲಾಸ್ಪತ್ರೆ ಡಾ.ಸರ್ಜನ್ ಶರಣಪ್ಪ ಕಟ್ಟಿ, ಆಹಾರ ಇಲಾಖೆ ಜಂಟಿ ನಿರ್ದೇಶಕಿ ಕುಮಾರಿ ಸುರೇಖಾ, ಜಿಲ್ಲಾ ಸವರ್ೆಕ್ಷಣಾಧಿಕಾರಿ ಡಾ.ಮಲ್ಲನಗೌಡ ಬಿರಾದಾರ, ಡಾ. ಧಾರವಾಡಕರ, ಡಾ. ಲಕ್ಕಣ್ಣವರ್, ಪಶು ಸಂಗೋಪನಾ ಇಲಾಖೆಯ ಉಪನಿದರ್ೇಶಕ ಪ್ರಾಣೇಶ ಜಾಹಗೀರದಾರ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.