ಕೈ ಸರ್ಕಾರದ ಬೆಲೆ ಏರಿಕೆ ಖಂಡನೀಯ : ವಿಜಯ ಜೋಶಿ
ವಿಜಯಪುರ 1 : ಗಾಳಿಯನ್ನು ಹೊರತುಪಡಿಸಿ ಮಿಕ್ಕೆಲ್ಲಾ ವಸ್ತುಗಳು ಕಾಂಗ್ರೇಸ್ ಸರ್ಕಾರ ಹೆಚ್ಚಿಸಿದೆ. ಆನರ ಕಷ್ಟವನ್ನು ಕಿಂಚಿತ್ತು ಅರ್ಥ ಮಾಡಿಕೊಳ್ಳಲು ಅಸಮರ್ಥವಾದ ಆಡಳಿತವನ್ನು ಸಿದ್ಧರಾಮಯ್ಯನ ಸರ್ಕಾರ ನೀಡುತ್ತಿದ್ದಾರೆ. ಮತ ಕೊಟ್ಟು ಅಧಿಕಾರಕ್ಕೆ ತಂದ ಮತದಾರರಿಗೆ ವರವಾಗುವ ಬದಲು ಈ ಸರ್ಕಾರ ಶಾಪಗ್ರಸ್ಥವಾಗಿದೆ. ಹಾಲಿನ ದರವನ್ನು ರೂ. 4 ಹೆಚ್ಚಳ ಮಾಡು7ವವರೆಗೆ ಒಂದಾದ ಮೇಲೆ ಒಂದು ಪದಾರ್ಥಗಳ ಬೆಲೆಯನ್ನು ಹೆಚ್ಚಳ ಮಾಡುತ್ತಿರುವುದು ಖಂಡನೀಯ. ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮಾರಣಾಂತಿಕ ಪೆಟ್ಟನ್ನು ನೀಡಿದ್ದಾರೆ. ವಿದ್ಯುತ್ ಇಲಾಖೆಯ ನೌಕರರಿಗೆ ಪಿಂಚಿಣಿ ಕೊಡಲು ಹಣವಿಲ್ಲದೆ ದಿವಾಳಿಯಾಗಿರುವ ಸರ್ಕಾರ ವಿದ್ಯುತ್ ಗ್ರಾಹಕರಿಂದ ಹಣ ಸುಲಿಗೆ ಮಾಡಿಕೊಡಲು ಮುಂದಾಗಿರುವುದು ನಾಚಿಗೇಡಿನ ಸಂಗಿತಿಯಾಗಿದೆ. ರಾಜ್ಯದ ಇತಿಹಾಸದಲ್ಲೇ ಕಂಡ ಅತ್ಯಂತ ಜನವಿರೋಧಿ ಸರ್ಕಾರವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ವಿಜಯಪುರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ವಿಜಯ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.