ಅರ್ಹ ಫಲನಾಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಬೇಕು- ಜಿಲ್ಲಾಧಿಕಾರಿಗಳಿಗೆ ಮನವಿ

Government schemes should reach eligible beneficiaries - Appeal to District Collectors

ಅರ್ಹ ಫಲನಾಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪಬೇಕು- ಜಿಲ್ಲಾಧಿಕಾರಿಗಳಿಗೆ ಮನವಿ 

ಗದಗ 11: ಜಿಲ್ಲೆಯ ಬಡಅಲ್ಪಸಂಖ್ಯಾತರ ಸಮುದಾಯಗಳಿಗೆ ಸರ್ಕಾರದ ಯೋಜನೆಗಳಮಾಹಿತಿ ನೀಡುವಲ್ಲಿಅಲ್ಪಸಂಖ್ಯಾತರಅಭಿವೃಧ್ದಿ ನಿಗಮದಅಧಿಕಾರಿ ಸಂಪೂರ್ಣ ವಿಫಲರಾಗಿದ್ದಾರೆ. ಅರ್ಹ ಫಲನಾಭವಿಗಳಿಗೆ ಯೋಜನೆಗಳನ್ನು ನೀಡುವುದನ್ನು ಬಿಟ್ಟು ಮಧ್ಯವರ್ತಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಮಂಜೂರು ಮಾಡುತ್ತಿರುವ ಭ್ರಷ್ಟ ಹಾಗೂ ಜನವಿರೋಧಿ ನಿಗಮದ ವ್ಯವಸ್ಥಾಪಕರ ಮೇಲೆ ಕ್ರಮಕೈಗೊಳ್ಳಬೇಕೆಂದು ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದ್ದಾರೆ. 

 ಸಮಿತಿ ಅಧ್ಯಕ್ಷರಾದ ಇಮ್ತಿಯಾಜ. ಆರ್‌.ಮಾನ್ವಿ ಮಾತನಾಡಿರಾಜ್ಯ ಸರ್ಕಾರದಿಂದ ಅಲ್ಪಸಂಖ್ಯಾತರ ಸಮುದಾಯಗಳ ಉದ್ಯೋಗ, ಶಿಕ್ಷಣ ಮತ್ತು ಅಭಿವೃಧ್ದಿಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಬಜೇಟನಲ್ಲಿ ನೂರಾರು ಕೋಟಿ ಅನುದಾನವನ್ನು ಘೋಷಣೆ ಮಾಡಿದೆ, ಇದರ ಮೂಲಕ ಅಲ್ಪಸಂಖ್ಯಾತರ ಸಮುದಾಯಗಳಿಗೆ ಆರ್ಥಿಕ ಮತ್ತು ಸಾಮಾಜಿಕ ಬೆಳವಣೆಗಾಗಿ ನೆರವು ನೀಡಲಾಗುತ್ತಿದೆ, ಆದರೆ ಗದಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ವ್ಯವಸ್ಥಾಪಕರು ಸರ್ಕಾರದ ಜನಪರವಾದ ಯೋಜನೆಗಳ ಮಾಹಿತಿಯನ್ನು ನೀಡದೇ ಗದಗ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದ್ದಾರೆ.  

ಭ್ರಷ್ಟ ಅಧಿಕಾರಿಯಿಂದ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದರಿಂದ ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳು ಸರ್ಕಾರದ ಜನಪರವಾದ ಯೋಜನೆಗಳಿಂದ ವಂಚಿತರಾಗಿದ್ಧಾರೆ ಎಂದು ಆರೊಪಿಸಿದರು. ಈ ಕೊಡಲೇ ಇಂತಹ ಜನವಿರೋಧಿ, ಬಡವರ ವಿರೋದಿ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಅಧಿಕಾರಿಯನ್ನು ಗದಗ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು, ಒಂದು ವೇಳೆನಮ್ಮ ಮನವಿಗೆ ಸ್ಪಂದಿಸದಿದ್ದರೆ ಗದಗ ಜಿಲ್ಲಾ ಅಲ್ಪಸಂಖ್ಯಾತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಹಾಗೂ ಗದಗಜಿಲ್ಲಾ ಸ್ಲಂ ಸಮಿತಿಯ ಸಹಕಾರದಲ್ಲಿ ಸಾವಿರಾರುಜನರೊಂದಿಗೆ ಮೌಲಾನಾ ಆಜಾದ ಕಟ್ಟಡದಲ್ಲಿರುವ ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದ ಕಚೇರಿಯ ಮುಂದೆ ಉಗ್ರವಾದ ಹೋರಾಟವನ್ನು ನಡೆಸಲಾಗುವುದು ಎಂದು ಮನವಿ ಮೂಲಕ ಎಚ್ಚರಿಸಲಾಗಿದೆ.  

ಗದಗ ಜಿಲ್ಲಾಅಲ್ಪಸಂಖ್ಯಾತರ ಹೋರಾಟ ಸಮಿತಿ ಉಪಾಧ್ಯಕ್ಷ ಬಾಬಾಜಾನ ಬಳಗಾನೂರ, ಕಾರ್ಯದರ್ಶಿ ಇಬ್ರಾಹಿಂ ಹಳ್ಳಿಕೇರಿ, ಮುಖಂಡರಾದ ಮೆಹಬೂಬಸಾಬ ಬಳ್ಳಾರಿ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಖಾಜಾಸಾಬ ಇಸ್ಮಾಯಿಲನವರ, ಸಲೀಂ ಹರಿಹರ, ಅಬ್ದುಲಸಲಾಮ ಮನಿಯಾರ, ಬಾಷಾಸಾಬ ಡಂಬಳ, ಜಂದಿಸಾಬ ಬಳ್ಳಾರಿ, ಮಕ್ತುಮಸಾಬ ಮುಲ್ಲಾನವರ ಹಾಗೂ ಮುಂತಾದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.