ಗ್ಯಾರಂಟಿ ಸಮಿತಿ ಕಚೇರಿ ಪೂಜಾ ಕಾರ್ಯಕ್ರಮ

Guarantee Committee Office Puja Program

ಗ್ಯಾರಂಟಿ ಸಮಿತಿ ಕಚೇರಿ ಪೂಜಾ ಕಾರ್ಯಕ್ರಮ

ಗದಗ 13 : ನಗರದ ಮುಳಗುಂದ ನಾಕಾ ಸಮೀಪದಕೆಎಸ್‌ಆರ್ಟಿಸಿ ಡಿಪೋ ಎದುರಿನ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರ ಕಚೇರಿ ಪೂಜಾ ಕಾರ್ಯಕ್ರಮ ಏಪ್ರಿಲ್ 15 ರಂದು ಬೆಳಗ್ಗೆ 11ಕ್ಕೆ  ಜರುಗಲಿದೆ.ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್‌.ಕೆ.ಪಾಟೀಲ ಅವರು ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್‌.ಎಂ. ರೇವಣ್ಣ, ಉಪಾಧ್ಯಕ್ಷರಾದ ಎಸ್‌.ಆರ್‌. ಪಾಟೀಲ(ಬ್ಯಾಡಗಿ), ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಜಿ.ಎಸ್‌. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನ ಪರಿಷತ್ ಸದಸ್ಯ ರಾದ ಎಸ್‌.ವಿ. ಸಂಕನೂರ, ಪ್ರದೀಪ ಶೆಟ್ಟರ್, ನರಗುಂದ ಶಾಸಕರಾದ ಸಿ.ಸಿ. ಪಾಟೀಲ ಆಗಮಿಸುವರು.ಗದಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಕೃಷ್ಣಗೌಡ ಎಚ್‌. ಪಾಟೀಲ, ಮೀನಾಕ್ಷಿ ಬೆನಕಣ್ಣವರ, ದೇವರಡ್ಡಿ ತಿರ್ಲಾಪೂರ, ಶಂಭು ಕಾಳೆ, ರಮೇಶ ಹೊನ್ನಿನಾಯ್ಕರ, ಭಾಷಾಸಾಬ ಮಲ್ಲಸಮುದ್ರ, ದಯಾನಂದ ಪವಾರ, ನಿಂಗಪ್ಪ ದೇಸಾಯಿ, ಸಂಗಮೇಶ ಕೆರಕಲಮಟ್ಟಿ, ಸಂಗಮೇಶ ಹಾದಿಮನಿ, ಮಲ್ಲಪ್ಪ ದಂಡಿನ, ಗಣೇಶಸಿಂಗ್ ಮಿಟಾಡ, ಮಲ್ಲಪ್ಪ ಬಾರಕೇರ, ಸಾವಿತ್ರಿ ಹೂಗಾರ ಪಾಲ್ಗೊಳ್ಳುವರು ಎಂದು ಜಿಪಂ ಉಪಕಾರ್ಯದರ್ಶಿ ಸಿ.ಆರ್‌. ಮುಂಡರಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ, ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಸರ್ವರಿಗೂ ಸ್ವಾಗತ ಕೋರಿದ್ದಾರೆ.