ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ವಾತಾವರಣ: ಜನ ಜಾಗೃತಿ ಆಂದೋಲನ

ಗದಗ 28: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಯ ವಾತಾವರಣವನ್ನು ನಿಮರ್ಿಸಿ ಅವರ ಜೀವನ ಮಟ್ಟವನ್ನು ಸುಧಾರಿಸಲು ಹಾಗೂ  ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ನಿರ್ವಹಣೆ ಮಾಡುವ ಕುರಿತು ಜನ ಜಾಗೃತಿ ಮೂಡಿಸಲು ಸ್ವಚ್ಛ ಮೇವ ಜಯತೆ ಆಂದೋಲನ ಅತೀ ಅವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಮಂಜುನಾಥ ಚವ್ಹಾಣ ನುಡಿದರು.

ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿಂದು ಜರುಗಿದ ಸ್ವಚ್ಛ ಮೇವ ಜಯತೆ ಆಂದೋಲನದ ಹೋಬಳಿ ಮತ್ತು ಗ್ರಾಮ ಪಂಚಾಯತ ನೋಡೆಲ್ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಜನರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವದು ಅತೀ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಚ ಮೇವ ಜಯತೆ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ. ಈ ಆಂದೋಲನವು ಒಂದು ತಿಂಗಳ ಕಾಲ ಜರುಗಲಿದ್ದು ಇದರ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಬಳಿಗಳಿಗೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ನೋಡೆಲ್ ಅಧಿಕಾರಿಗಳೆಂದು ನಿಯಮಿಸಲಾಗಿದ್ದು ಅಧಿಕಾರಿಗಳು ಜಿಲ್ಲೆ, ತಾಲೂಕು, ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ವಿವಿಧ ಜನ ಜಾಗೃತಿ ಕಾರ್ಯಕ್ರಗಳನ್ನ ಹಮ್ಮಿಕೊಂಡು ಸ್ವಚ್ಛತೆಯ ವಾತಾವರಣವನ್ನು ನಿರ್ಮಾಣ ಮಾಡಲು ತಮಗೆ ವಹಿಸಿದ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಲು ಸೂಚಿಸಿದರು.  ಗ್ರಾಮೀಣ ಸಮುದಾಯದ ಜನರಲ್ಲಿ ಸ್ವಚ್ಛತೆ, ವೈಯಕ್ತಿಕ ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆಯಿಂದಾಗುವ ಪ್ರಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಗೋಡೆ ಬರಹ, ಬೀದಿ ನಾಟಕ, ಜಾಥಾ ಹಾಗೂ ಶೌಚಾಲಯಗಳ ಬಳಕೆ ಅಭಿಯಾನದಂತಹ ಕಾರ್ಯಕ್ರಗಳನ್ನು ಹಮ್ಮಿಕೊಂಡು ಸ್ವಚ್ಛ ಮೇವ ಜಯತೆ  ಆಂದೋಲನವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಿ ಪ್ರತಿ ಗ್ರಾಮಗಳಲ್ಲಿ ಸ್ವಚ್ಛತೆಯ ವಾತಾವರಣವನ್ನು ನಿಮರ್ಿಸಲು ಸೂಚನೆ ನೀಡಿದರು. ಭವಿಷ್ಯದ ದೃಷ್ಟಿಯಿಂದ  ನೀರಿನ ಸದ್ಭಳಕೆ ಹಾಗೂ ಸಂರಕ್ಷಣೆ ಮಾಡಬೇಕಾದುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಜಲ ಸಂಸರಕ್ಷಣೆ, ನೀರಿನ ಮೂಲಗಳ ಪುನಶ್ಚೇತನ ಹಾಗೂ ಹೊಸ ನೀರಿನ ಮೂಲಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಜಿ.ಪಂ. ಸಿ.ಇ.ಓ ಮಂಜುನಾಥ ಚವ್ಹಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ.ಪಂ. ಉಪಕಾರ್ಯದರ್ಶಿ  ಪ್ರಾಣೇಶ ರಾವ, ಜಿ.ಪಂ. ಯೋಜನಾ ನಿದರ್ೇಶಕ ಟಿ.ದಿನೇಶ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತಿರಿದ್ದರು.