ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆ
ಕೊಪ್ಪಳ 21: : ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟನೆ ಮಾಡಲಿದ್ದಾರೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೆ ಚಂದ್ರಶೇಖರ್ ತಿಳಿಸಿದ್ದಾರೆ.ಮೆ 23 ಶುಕ್ರವಾರ ಬೆಳಿಗ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ನಗರಗಡ್ಡಿ ಮಠದ ಶ್ರೀ ಶಾಂತ ಲಿಂಗೇಶ್ವರ ಮಹಾಸ್ವಾಮಿಗಳು ಸಾನಿಧ್ಯ ವಹಿಸಲಿದ್ದು, ಸ್ಥಳೀಯ ಶಾಸಕ ಕೆ ರಾಘವೇಂದ್ರ ಹಿಟ್ನಾಳ್, ಸಂಸದ ಕೆ ರಾಜಶೇಖರ್ ಹಿಟ್ನಾಳ, ಜನಪ್ರತಿನಿಧಿಗಳು, ಸಹಕಾರಿ ಇಲಾಖೆ ಅಧಿಕಾರಿಗಳು,ವಿವಿಧ ಸಂಘದ ಅಧ್ಯಕ್ಷರು ನಿರ್ದೇಶಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯದರ್ಶಿ ಬಸವನಗೌಡ ಜನತಪುರ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.