ಕೊಪ್ಪಳ : ಭಗವಾನ ಮಹಾವೀರ ಜಯಂತಿ: ಜಿಲ್ಲಾಡಳಿತದಿಂದ ಭಕ್ತಿ ನಮನ

ಕೊಪ್ಪಳ 19: ಭಗವಾನ ಮಹಾವೀರ ಜಯಂತಿಯ ಅಂಗವಾಗಿ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ ಮಹಾವೀರರವರ ಭಾವಚಿತ್ರಕ್ಕೆ ಪುಷ್ಪವನ್ನು ಅಪರ್ಿಸಿ ಭಕ್ತಿ ನಮನ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.  

ಲೋಕಸಭಾ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆಯ ಕಾರಣದಿಂದಾಗಿ ಜಿಲ್ಲಾಡಳಿತ ವತಿಯಿಂದ ಭಗವಾನ ಮಹಾವೀರ ಅವರ ಜಯಂತಿಯನ್ನು ಬುಧವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಸರಳವಾಗಿ ಆಚರಿಸಲಾಯಿತು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಆರ್.ಎಸ್. ಪೆದ್ದಪ್ಪಯ್ಯ, ಅಪರ ಜಿಲ್ಲಾಧಿಕಾರಿ ಬಾಲಚಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿದರ್ೇಶಕ ಕೃಷ್ಣಮೂತರ್ಿ ದೇಸಾಯಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಗವಾನ ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆಗೈದು ಭಕ್ತಿ ನಮನ ಸಲ್ಲಿಸಿದರು.  ವಿವಿಧ ಇಲಾಖೆಗಳ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.