ಕೊಪ್ಪಳ 19: ಮಕ್ಕಳಿಂದ ಚುನಾವಣಾ ಪ್ರಚಾರ ಮಾಡಿಸಿದ ಹಾಗೂ ಮಕ್ಕಳನ್ನು ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡ ಪಕ್ಷಗಳ ವಿರುದ್ಧ ಪ್ರಕರಣವನ್ನು ಈಗಾಗಲೇ ದಾಖಲಿಸಲಾಗಿದ್ದು, ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ರವರು ಸೂಚನೆಯನ್ನು ನೀಡಿದ್ದಾರೆ.
ಮಕ್ಕಳನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡು ಅವರನ್ನು ಶೋಷಿಸುವದನ್ನು ನಿಷೇಧಿಸಲಾಗಿದೆ. ಆದ್ದಾಗ್ಯೋ ಕೆಲವು ಪಕ್ಷಗಳು ಮಕ್ಕಳನ್ನು ಬಳಸಿಕೊಂಡಿರುವದು ಕಂಡುಬಂದಿದ್ದರಿಂದಾಗಿ ಅಂತಹ ಪಕ್ಷಗಳ ವಿರುದ್ದ ಪ್ರಕರಣಗಳನ್ನು ದಾಖಲಿಸಲಾಗಿದೆ. "ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ '18 ವರ್ಷದೊಳಗಿನ ಎಲ್ಲಾ ಮಾನವಜೀವಿಗಳು ಮಕ್ಕಳು ಎಂದು ಪರಿಗಣಿತವಾಗಿದೆ''. ಇದರ ಕಲಂ 32 ಮತ್ತು 36ರಲ್ಲಿ "ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ, ಮಕ್ಕಳು ಕಾರ್ಯನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣೆಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸುವುದನ್ನು ನಿಷೇಧಿಸುತ್ತದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ನವದೆಹಲಿ, ಮುಖ್ಯ ಚುನಾವಣಾಧಿಕಾರಿಗಳ ಕಾಯರ್ಾಲಯ, ನವದೆಹಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು ರವರು 'ಚುನಾವಣಾ ಕಾರ್ಯಗಳಲ್ಲಿ ಮತ್ತು ಯಾವುದೇ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಹಾಗೂ ಬೇಸಿಗೆ ರಜೆಗಳು ಪ್ರಾರಂಭವಾಗಿದ್ದು, ಅಲ್ಲದೇ ರಾಜ್ಯದಲ್ಲಿ ಬಿಸಿಲಿನ ಪ್ರಕರತೆ ಹೆಚ್ಚಾಗಿರುವದರಿಂದಾಗಿ, ಮಕ್ಕಳನ್ನು ಚುನಾವಣಾ ಪ್ರಚಾರ ಕಾರ್ಯದಲ್ಲಿ ಬಳಸಿಕೊಂಡು, ಮಕ್ಕಳನ್ನು ಶೋಷಿಸುವದನ್ನು ತಡೆಗಟ್ಟಬೇಕೆಂದು ನಿದರ್ೇಶಿಸಿದೆ.
ಈ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತವು ಮಾದರಿ ಚುನಾವಣಾ ನೀತಿ ಸಂಯುತೆ ಜಾರಿ ತಂಡಗಳ ಮುಖಾಂತರ ರಾಜಕೀಯ ಪಕ್ಷಗಳು ಮಕ್ಕಳನ್ನು ಚುನಾವಣಾ ಕಾರ್ಯದಲ್ಲಿ ಬಳಸಿದ್ದಕ್ಕಾಗಿ `'ಮಕ್ಕಳು ಮತ್ತು ಕಿಶೋರಾವಸ್ಥೆ ಕಾಮರ್ಿಕ ಪದ್ಧತಿ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ-2016'' ಮತ್ತು 'ಭಾರತೀಯ ದಂಡ ಸಂಹಿತೆ'ಯ ವಿವಿಧ ಕಲಂಗಳ ಅನ್ವಯ ಜಿಲ್ಲೆಯಾದ್ಯಂತ 4 ಪ್ರಕರಣಗಳನ್ನು ದಾಖಲಿಸಿದೆ. ಅವುಗಳೆಂದರೆ ಕೊಪ್ಪಳ ನಗರ ಠಾಣೆಯಲ್ಲಿ ಏಪ್ರಿಲ್. 05ರಂದು ಕಾಂಗ್ರೆಸ್ ಹಾಗೂ ಬಿ.ಜಿ.ಪಿ ಪಕ್ಷಗಳ ಜಿಲ್ಲಾಧ್ಯಕ್ಷರ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಗಂಗಾವತಿ ನಗರ ಠಾಣೆಯಲ್ಲಿ ಏಪ್ರಿಲ್. 13ರಂದು ಬಿ.ಜಿ.ಪಿ ಪಕ್ಷದ ವಿರುದ್ಧ ಮತ್ತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಕಾಂಗ್ರಸ್ ಪಕ್ಷದ ವಿರುದ್ಧ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡದ್ದಕ್ಕಾಗಿ ಫ್ಲೈಯಿಂಗ್ ಸ್ಕ್ವಾಡ ಅಧಿಕಾರಿಗಳ ಮೂಲಕ ಪ್ರಕರಣಗಳನ್ನು ದಾಖಲಿಸಿದೆ.
ಆದ್ದರಿಂದ ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಬಾರದು. ಜಿಲ್ಲೆಯ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿ ಗಳು ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡರೇ ಸೂಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.