ಕೊಪ್ಪಳ: ರೋಟಾ ವೈರಸ್ ಲಸಿಕೆ ಕುರಿತ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ: ಅಪರ ಜಿಲ್ಲಾಧಿಕಾರಿ ಅಯಿಷಾ

ಕೊಪ್ಪಳ 02: ರೋಟಾ ವೈರಸ್ ಲಸಿಕೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಬೇಕು. ಸ್ವಚ್ಛತೆ ಹಾಗೂ ರೋಟಾ ವೈರಸ್ ಲಸಿಕೆಯಿಂದಾಗುವ ಅನುಕೂಲತೆಗಳು ಮತ್ತು ಮರಣ ಪ್ರಮಾಣವನ್ನು ತಡೆಗಟ್ಟುವಲ್ಲಿ ಈ ಲಸಿಕೆ ವಹಿಸುವ ಪಾತ್ರದ ಕುರಿತು ಜನಸಾಮಾನ್ಯರಲ್ಲಿ ತಿಳುವಳಿಕೆ ಮೂಡಿಸುವ ಕಾರ್ಯದಲ್ಲಿ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ರೋಟಾ ವೈರಸ್ ಲಸಿಕೆ ಕುರಿತ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು (ಆಗಸ್ಟ್.02) ನಡೆದ ರೋಟಾ ವೈರಸ್ ಲಸಿಕೆಯ ಪರಿಚಯ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ರೋಟಾ ವೈರಸ್ನಿಂದಾಗುವ ಅತಿಸಾರ ಬೇಧಿ ವಿರುದ್ಧ ಮಕ್ಕಳ ರಕ್ಷಣೆ ಮಾಡುವ ಸಲುವಾಗಿ ಭಾರತ ಸಕರ್ಾರವು ರೋಟಾ ವೈರಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಪರಿಚಯಿಸಲಾಗುತ್ತಿದೆ. ರೋಟಾ ವೈರಸ್ ಲಸಿಕೆಗಳ ಬಗ್ಗೆ ಜನಸಾಮಾನ್ಯರಿಗೆ ತಿಳಿಸುವ ನಿಟ್ಟಿನಲ್ಲಿ ವೈದ್ಯರು ಹಾಗೂ ಆರೋಗ್ಯ ಮೇಲ್ವಿಚಾರಕರಿಗೆ ಈ ಕುರಿತು ತರಬೇತಿಗಳನ್ನು ನೀಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ರೋಟಾ ವೈರಸ್ ಲಸಿಕೆ ತರಬೇತಿಯನ್ನು ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಮ್ಮ ವ್ಯಾಪ್ತಿಯ ಅಂಗನವಾಡಿಗಳ ಕಾರ್ಯಕತರ್ೆಯರಿಗೆ ಸೂಚನೆ ನೀಡಬೇಕು. ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಲಸಿಕಾ ವೇಳಾಪಟ್ಟಿಯನ್ನು ತಮ್ಮ ಅಂಗನವಾಡಿಗಳಲ್ಲಿ ಪ್ರದಶರ್ಿಸಬೇಕು. ಮಕ್ಕಳಿಗೆ 6ನೇ, 10ನೇ ಮತ್ತು 14ನೇ ವಾರದ ವಯಸ್ಸಿನಲ್ಲಿ ರೋಟಾ ವೈರಸ್ ಲಸಿಕೆ ಹಾಕಿಸುವಂತೆ ಪಾಲಕರಿಗೆ ತಿಳುವಳಿಕೆ ನೀಡಿ ಅವರ ಮನವೊಲಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಿಜಿಸ್ಟರ್ 5 ಮತ್ತು6 ರಲ್ಲಿ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪರಿಷ್ಕೃತ ವೇಳಾಪಟ್ಟಿಯನ್ನು ಅಳವಡಿಸಿ, ಮುದ್ರಣ ಮಾಡಿಸಬೇಕು. ಕಡ್ಡಾಯವಾಗಿ ತಾಯಂದಿರ ಸಭೆ ಹಾಗೂ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸಭೆಗಳಲ್ಲಿ ರೋಟಾ ಲಸಿಕೆ ಕುರಿತು ಮಾಹಿತಿ ನೀಡಬೇಕು. ಗಭರ್ಿಯರಿಗೆ ಟಿ.ಡಿ ಲಸಿಕೆ ಪಡೆಯಲು ಪ್ರೇರೆಪಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಕಾಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕಾ ಮಟ್ಟದ ಆರೋಗ್ಯಾಧಿಕಾರಿಗಳು, ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ಪ್ರತಿನಿಧಿಗಳು, ನಗರದ ಖಾಸಗಿ ವೈದ್ಯಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.