ಧಾರವಾಡ 30: ಎಲ್ಲ ಜೀವ ಜಲಚರಗಳಿಗೆ ನೀರು ಮುಖ್ಯ. ನೀರು ಜೀವಕ್ಕೆ ಸಮಾನ. ಅದ್ದರಿಂದ ಜಲಸಂರಕ್ಷಣೆ ಮನೋಭಾವವನ್ನು ಅಧಿಕಾರಿಗಳು ವ್ಯಕ್ತಿಗತವಾಗಿ ಬೆಳೆಸಿಕೊಂಡು ಜಲ ಸಂರಕ್ಷಣೆಗೆ ಸಂಕಲ್ಪ ಮಾಡಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ರೋಟರಿ ಕ್ಲಬ್ ಬೇಲೂರ, ಧಾರವಾಡ ಗ್ರೋಥ ಸೆಂಟರ್ ಇಂಡಸ್ಟ್ರೀಸ್ ಅಸೋಸಿಯೇಷನ್ ಮತ್ತು ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಅಂತರ್ಜಲ ಅಭಿವೃದ್ಧಿ, ಚೆಕ್ಡ್ಯಾಂ, ಮಳೆನೀರು ಕೊಯ್ಲು ಹಾಗೂ ಜಲಮರುಪೂರಣ ಕುರಿತು ಒಂದು ದಿನದ ಕಾಯರ್ಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರು, ನೀರಾವರಿ ಸೇರಿದಂತೆ ಎಲ್ಲ ಕಾರ್ಯಗಳಿಗಾಗಿ ನೆರೆಯ ಜಿಲ್ಲೆಗಳ ನೀರಿನ ಮೇಲೆ ಹೆಚ್ಚಾಗಿ ಅವಲಂಬನೆಯಾಗಿದ್ದು, ಮಳೆಕೊಯ್ಲು, ಜಲ ಮರುಪೂರಣ, ಜಲಸಂರಕ್ಷಣೆ ಮೂಲಕ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕಾಗಿದೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ: ಬಿ.ಸಿ. ಸತೀಶ್ ಅವರು ಮಳೆಗಾಲ ಪೂರ್ವದಲ್ಲಿ ಜಲಜಾಗೃತಿಗೆ ಗ್ರಾಮಮಟ್ಟದಿಂದ ಆರಂಭಿಸಿರುವುದು ಶ್ಲಾಘನೀಯ. ಪ್ರತಿ ಗ್ರಾಮಮಟ್ಟದ ಅಧಿಕಾರಿ ತಮ್ಮ ವ್ಯಾಪ್ತಿಯ ಪ್ರದೇಶಗಳಲ್ಲಿ ಹರಿಯುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಮತ್ತು ಭೂಮಿಯಲ್ಲಿ ಇಂಗಿಸುವ ಕಾರ್ಯ ಮಾಡಬೇಕು. ಇದು ಪ್ರತಿಯೊಬ್ಬ ಅಧಿಕಾರಿ ಕರ್ತವ್ಯದೊಂದಿಗೆ ಸಾಮಾಜಿಕ ಜವಾಬ್ದಾರಿಯೆಂದು ಸಂಕಲ್ಪ ಮಾಡಿದರೆ ಮಾತ್ರ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಸಕರ್ಾರ ಎರಡು ತಾಲೂಕುಗಳನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಉಳಿದ ತಾಲೂಕುಗಳಲ್ಲಿಯೂ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಇದಕ್ಕೆ ಜಿಲ್ಲಾಡಳಿತ ಅಗತ್ಯವಿರುವ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಪ್ರತಿಯೊಬ್ಬರಲ್ಲಿ ಜಲಜಾಗೃತಿ ಮೂಡಿಸುವ ಕಾರ್ಯವಾಗಬೇಕೆಂದು ಅವರು ಹೇಳಿದರು.
ಮುಂದಿನ ಮೂರುನಾಲ್ಕು ತಿಂಗಳಲ್ಲಿ ಈ ಕುರಿತು ಕ್ರಮಕೈಗೊಂಡು ಉಳಿದ ಜಿಲ್ಲೆಗಳಿಗೆ ಮಾದರಿಯಾಗುವಂತೆ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ದೀಪ ಚೋಳನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷತೆಯನ್ನು ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಚೈತ್ರಾ ಶಿರೂರ, ಉಪಾಧ್ಯಕ್ಷ ಶಿವಾನಂದ ಕರಿಗಾರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕಲ್ಲಪ್ಪ ಪುಡಕಲಕಟ್ಟಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಚನ್ನವ್ವ ಶಿವನಗೌಡ್ರ, ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗನಗೌಡ ಪಾಟೀಲ, ರೇಣುಕಾ ಇಬ್ರಾಹಿಂಪೂರ, ವಿದ್ಯಾ ಭಾವಾನವರ, ವಿಜಯಲಕ್ಷ್ಮಿ ಕೆಂಪೇಗೌಡ, ಮಂಜಮ್ಮ ಹರಿಜನ, ಕರೆಪ್ಪ ಮಾದರ, ಉಮೇಶ್ ಹೆಬಸೂರ, ರತ್ನಾ ಪಾಟೀಲ, ಈರಮ್ಮ ದಾಸನಕೊಪ್ಪ, ರೋಟರಿ ಕ್ಲಬ್ ಅಧ್ಯಕ್ಷ ಎಂ.ವಾಯ್ ಕಮತರ, ಧಾರವಾಡ ಗ್ರೋಥ ಸೆಂಟರ್ ಇಂಡಸ್ಟ್ರೀಜ್ ಅಸೋಸಿಯೇಷನ್ ಅಧ್ಯಕ್ಷ ಶ್ರೀಕಾಂತ ಹುಲಮನಿ, ಅಂತರ್ಜಲ ತಜ್ಞ ಡಾ. ದೇವರಾಜ್ ರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರ್ ಆರ್.ವಿ. ಮುನವಳ್ಳಿ ಭಾಗವಹಿಸಿದ್ದರು.
ಜಿಲ್ಲಾ ಪಂಚಾಯತ್ ಉಪಕಾರ್ಯದಶರ್ಿ ಎಸ್.ಜಿ. ಕೊರವರ ಸ್ವಾಗತಿಸಿ, ಸಭೆ ನಿರ್ವಹಿಸಿದರು. ಕಾಯರ್ಾಗಾರದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಪಂಚಾಯತ್ ರಾಜ್ ಇಲಾಖೆಯ ವಿವಿಧ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಡಾ. ದೇವರಾಜ ರೆಡಿ, ಆರ್.ವಿ. ಮುನವಳ್ಳಿ ಸೇರಿದಂತೆ ವಿವಿಧ ತಜ್ಞರು ಕಾಯರ್ಾಗಾರದಲ್ಲಿ ಜಲ ಸಂರಕ್ಷಣೆ ಕುರಿತು ಉಪನ್ಯಾಸ ನೀಡಿದರು.