ಲೋಕಸಭಾ ಚುನಾವಣೆ : ವಿವಿಧ ಸಿದ್ಧತೆಗಳ ಕುರಿತು ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ವಿಜಯಪುರ07: - ಲೋಕಸಭಾ ಸಾರ್ವತ್ರಿಕ ಚುನಾವಣೆಯು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಯಲು ಅವಶ್ಯಕ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಶ್ರೀಮತಿ ಎಂ.ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ದೇವರಹಿಪ್ಪರಗಿ ಮತಕ್ಷೇತ್ರಗಳಲ್ಲಿ ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಪಟ್ಟಂತೆ ಮಾಡಿಕೊಳ್ಳಲಾದ ಸಿದ್ಧತೆಗಳ ಬಗ್ಗೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಅತ್ಯಂತ ಮಹತ್ವದ ಚುನಾವಣೆ ಇದಾಗಿರುವುದರಿಂದ ಅಧಿಕಾರಿಗಳಿಗೆ ನೀಡಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ವಿವಿಧ ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಬಗ್ಗೆಯೂ ಪರಿಶೀಲನೆ ನಡೆಸಿದರು. ಅದರಂತೆ ಭದ್ರತಾ ಕೊಠಡಿಗಳ ಪರಿಶೀಲನೆ ಸೇರಿದಂತೆ ಇತರೆ ಚುನಾವಣಾ ಸಿದ್ಧತೆಗಳ ಬಗ್ಗೆ ಸಹ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚಚರ್ೆ ನಡೆಸಿದರು