ಲೋಕದರ್ಶನ ವರದಿ
ಬಸವೇಶ್ವರ ಏತ ನೀರಾವರಿ ಕಾಮಗಾರಿ ಪೂರ್ಣಗೊಸಲು ಅನುದಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ರಾಜು ಕಾಗೆ ಮನವಿ
ಸಂಬರಗಿ 25: ಗಡಿ ಗ್ರಾಮದ ರೈತರ ಕನಸಾಗಿರುವ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಸಲು ಅನುದಾನ ನೀಡಬೇಕೆಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಸಕ ರಾಜು ಕಾಗೆ ಮನವಿ ಮಾಡಿಕೊಂಡರು. ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಖಿಳೇಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ಉದ್ಘಾಟಿಸಲು ಕಾಮಗಾರಿ ಭರದಿಂದ ನಡೆಯುತ್ತಿದೆ.
ವಿಧಾನಸಭಾ ಚುನಾವಣೆಯಲ್ಲಿ ನೀಡಿರುವ ಭರವಸೆಯ ಪ್ರಕಾರ ಗಡಿ ಭಾಗದ ಬರಗಾಲ ಪೀಡಿತ 30 ಗ್ರಾಮಗಳಲ್ಲಿ ನೀರಾವರಿ ಯೋಜನೆ ಹಾಗೂ ಕೆರೆ ತುಂಬುವ ಕಾಮಗಾರಿ ಪೂರ್ಣಗೊಂಡ ನಂತರ ಈ ಭಾಗ ಹಸಿರು ಕ್ರಾಂತಿಯಾಗಿ ಬರಗಾಲ ಮುಕ್ತವಾಗುತ್ತದೆ. ಈ ಕಾಮಗಾರಿ ಕಾಂಗ್ರೆಸ್ ಸರಕಾರ ಚಾಲನೆ ನೀಡಿದೆ. ಆದರೆ ಪೂರ್ಣಗೊಂಡ ನಂತರ ಕಾಂಗ್ರೆಸ್ ಪಕ್ಷ ಉದ್ಘಾಟನೆ ಮಾಡುತ್ತದೆ. ಹೇಳಿದಂತೆ ನಡೆದಿರುವ ಸರಕಾರ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವದಿಲ್ಲ. ಒಂದನೇ ಹಂತದ ಕಾಮಗಾರಿ ಪೂರ್ಣಗೊಂಡು ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಿದೆ.
ನೀರಾವರಿ ಯೋಜನೆ ಪೂರ್ಣಗೊಂಡ ನಂತರ ಮುಂಬರುವ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಭಾರಿ ಮತದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯವಿದೆ. ಕಾರಣ ಈ ಯೋಜನೆ ಪೂರ್ಣಗೊಂಡ ನಂತರ ಕ್ಷೇತ್ರದ ಜನರ ವಿಶ್ವಾಸಕ್ಕೆ ಪಾತ್ರರಾಗುತ್ತೇವೆ. ಗಡಿ ಭಾಗದ ಬರಗಾಲ ಹಣೆಪಟ್ಟಿ ತೆಗೆದು ಹಾಕಲು ಸಾಧ್ಯವಾಗುತ್ತದೆ ಎಂದು ರಾಜು ಕಾಗೆ ತಿಳಿಸಿದ್ದಾರೆ.