ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ಎಫ್ಐ, ಡಿವಾಯ್ ಎಫ್ಐನಿಂದ ಬೃಹತ್ ಪ್ರತಿಭಟನೆ

ಲೋಕದರ್ಶನ ವರದಿ

ಗಜೇಂದ್ರಗಡ 05: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ  ವಿದ್ಯಾಥರ್ಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಭಾರತ ವಿದ್ಯಾರ್ಥಿ  ಫೆಡರೇಶನ್ (ಎಸ್.ಎಫ್.ಐ.) ಹಾಗೂ ಡಿವಾಯ್ಎಫ್ಐ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಐದು ಜನ ಎಬಿವಿಪಿ ಸಂಘಟನೆಯ ಕಾರ್ಯಕರ್ತರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ  ಮನವಿ ಸಲ್ಲಿಸಿದರು.

ನಗರದ ಕೆಕೆ ಸರ್ಕಲ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆಯುವ ಮೂಲಕ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಘೋಷಣೆ ಕೂಗುತ್ತಾ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಎಸ್ಎಫ್ಐನ ತಾಲೂಕಾ ಮುಖಂಡ ಚಂದ್ರು ರಾಠೋಡ ಮಾತನಾಡಿ ಅಮಲು ಪದಾರ್ಥ ಸೇವನೆ ಮಾಡಿ ಅಂತಹ ಪೈಶ್ಯಾಚಿಕ ಕೃತ್ಯ ನಡೆಸಿದ್ದಾರೆ. ಪುತ್ತೂರಿನಲ್ಲಿ ನಡೆದ ಘಟನೆಯಲ್ಲೂ ಪ್ರಜ್ಞೆ ತಪ್ಪಿಸಿ ಅತ್ಯಾಚಾರ  ಎಸಗಿದ್ದಾರೆ.  ನಾಗರೀಕ ಸಮಾಜ ತಲೆತಗ್ಗಿಸುವಂತ ಕೃತ್ಯ ಮಾಡಿದ್ದಾರೆ. ಇಂತವರನ್ನು ಬಂದಿಸಿ ಸೂಕ್ತ ತನಿಖೆ ನಡೆಸಿ ಅನ್ಯಾಯಕ್ಕೆ ಒಳಗಾದ ವಿದ್ಯಾಥರ್ಿನಿಗೆ ನ್ಯಾಯ ದೊರಕಿಸುವಲ್ಲಿ ಸಕರ್ಾರ ಮುಂದಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಎಸ್ ಎಫ್ ಐ ವಿದ್ಯಾಥರ್ಿ ಸಂಘಟನೆ ಮುಂದಾಗುತ್ತೆ ಎಂದು ಎಚ್ಚರಿಸಿದರು.

ಎಸ್ಎಫ್ಐ  ಮಾಜಿ ಜಿಲ್ಲಾಧ್ಯಕ್ಷ ಪೀರು ರಾಠೋಡ ಮಾತನಾಡಿ ಇತ್ತೀಚೆಗೆ ಬೆಳ್ತಂಗಡಿಯ ಕಾಲೇಜಿನಲ್ಲಿ ಎಬಿವಿಪಿ ಗೂಂಡಾಗಳು ವಿದ್ಯಾರ್ಥಿ ಯ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆಯಲ್ಲೂ ಅತ್ಯಾಚಾರಿಗಳು ಎಬಿವಿಪಿ ಸಂಘಟನೆಗೆ ಸೇರಿದವರಾಗಿದ್ದಾರೆ. ಈ ಹಿಂದೆಯೂ ಇಂತಹ ಕುಕೃತ್ಯಗಳು ದ.ಕ ಜಿಲ್ಲೆಯಲ್ಲಿ ನಡೆಯುತ್ತಾ ಬಂದಿವೆ. ಉಳ್ಳಾಲದ ಮುಕ್ಕಚೇರಿಯಲ್ಲಿ ಅಪ್ರಾಪ್ತ ವಯಸ್ಸಿನ ಹುಡುಗರು ವರ್ಷದ ಹಿಂದೆ ನಡೆಸಿದ ಯುವಕನೊಬ್ಬನ ಕೊಲೆ ಪ್ರಕರಣ ಹೀಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಅಪರಾಧ ಚಟುವಟಿಕೆಗಳ ಹಿಂದೆ ಡ್ರಗ್ಸ್, ಗಾಂಜಾ , ಅಫೀಮು ಮಾಫಿಯಾ ಕೆಲಸ ಮಾಡುತ್ತಿದೆ. ವಿದ್ಯಾಥರ್ಿ ಯುವಜನರು ಇದರ ದಾಸ್ಯಕ್ಕೆ ಒಳಗಾಗಿ ಕ್ರಿಮಿನಲ್ ಚಟುವಟಿಕೆಗಳ ಕಡೆ ಆಕಷರ್ಿತರಾಗುತ್ತಿದ್ದಾರೆ.

ಈ ಬಗ್ಗೆ ಧ್ವನಿ ಎತ್ತಿ ಗಾಂಜಾ, ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಬೇಕಿದ್ದ ಜಿಲ್ಲೆಯ ಸಂಸದರು ಮತ್ತು ಶಾಸಕರು ಗೋವು, ಆಪರೇಷನ್ ಕಮಲ, ಆಪರೇಷನ್ ಹಸ್ತ ಎಂಬ ರಾಜಕೀಯದಲ್ಲಿ ಬ್ಯುಸಿಯಾಗಿದ್ದಾರೆ ಪೋಲಿಸ್ ಇಲಾಖೆ ಕೂಡಾ ಅಪರಾಧ ತಡೆಗಟ್ಟವಲ್ಲಿ ವಿಫಲವಾಗಿದೆ.   ರಾಜಕಾರಣಿಗಳು ನಮ್ಮ ಮಕ್ಕಳ ಪರವಾಗಿ ಧ್ವನಿ ಎತ್ತುತ್ತಾರೆ ಎಂಬ ಜನರ ನಿರೀಕ್ಷೆ  ಹುಸಿಯಾಗಿದೆ. ಸುನೀತಾ ಸಿಂಗ್ ಎಂಬ ಬಿಜೆಪಿ ನಾಯಕಿ ಹೆಣ್ಣುಮಕ್ಕಳನ್ನು ಅತ್ಯಾಚಾರ ಮಾಡಿ ಎಂದು ಸಂಘಪರಿವಾರದ ಪುರುಷರಿಗೆ ಕರೆ ನೀಡಿದ್ದರು. ಕರೆ ಕೊಟ್ಟ ನಾಲ್ಕೆ ದಿನದಲ್ಲಿ ಅಮಲು ಪದಾರ್ಥ ನೀಡಿ ವಿದ್ಯಾಥರ್ಿನಿಯ ಮೇಲೆ ದೌರ್ಜನ್ಯ ನಡೆಸಲಾಗಿದೆ. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲು ಸಂಬಂಧಪಟ್ಟ ಅಸದಿಕಾಗಳು, ಜನ ಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹಿಸಿದರು.