ಲೆಕ್ಕ ಪರಿಶೋಧನಾ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಎಚ್.ಕೆ.ಪಾಟೀಲ ಚಾಲನೆ
ಗದಗ 19: ರಾಜ್ಯದ ಕಾನೂನು, ನ್ಯಾ0ು ಮತ್ತು ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ನಗರದ ಗಂಗಿಮಡಿ ರಸ್ತೆಯ 21 ನೇ ವಾರ್ಡನಲ್ಲಿ ಲೆಕ್ಕ ಪರಿಶೋಧಕರ ಕಾರ್ಯಾಲಯದ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು , ಗಣ್ಯರು ಹಾಜರಿದ್ದರು.