ಒಳಾಂಗಣ ಕ್ರೀಡಾಂಗಣ ವೀಕ್ಷಿಸಿದ ಸಚಿವ ಎಚ್‌.ಕೆ.ಪಾಟೀಲ

Minister HK Patil viewed the indoor stadium

ಒಳಾಂಗಣ ಕ್ರೀಡಾಂಗಣ ವೀಕ್ಷಿಸಿದ ಸಚಿವ ಎಚ್‌.ಕೆ.ಪಾಟೀಲ 

ಗದಗ   19:  ರಾಜ್ಯದ ಕಾನೂನು, ನ್ಯಾ0ು ಮತ್ತು ಮಾನವ ಹಕ್ಕುಗಳು, ಸಂಸದೀ0ು ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಕೆ.ಪಾಟೀಲ ಅವರು   ಗದಗ ನಗರದ ಕಳಸಾಪುರ ರಸ್ತೆಯಲ್ಲಿನ ಒಳಾಂಗಣ ಕ್ರೀಡಾಂಗಣದ ಹಿಂದೆ 3 ಅಂಕಣಗಳ ಟೆನಿಸ್  ಗ್ರೌಂಡ್ ನಿರ್ಮಾಣದ  ಸ್ಥಳವನ್ನು  ಪರೀಶೀಲಿಸಿದರು.  ಸದರಿ ಟೆನಿಸ್ ಗ್ರೌಂಡ್ ನಲ್ಲಿ 3 ಅಂಕಣಗಳ ನಿರ್ಮಾಣವಾಗಲಿದ್ದು ಮಾರ್ಚ 2 ನೇ ವಾರದಲ್ಲಿ ಶಿಲಾನ್ಯಾಸ ನೆರವೇರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಕ್ರೀಡಾ  ಅಧಿಕಾರಿಗಳಿಗೆ ಸೂಚಿಸಿದರು.  ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ,  ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಬಿ.ಅಸೂಟಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಸಿದ್ದು ಪಾಟೀಲ,   ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿ ಶರಣು ಗೋಗೇರಿ, ಡಾ. ಶ್ರೀಧರ್ ವಿ , ಕುರಡಗಿ ಸಿಬ್ಬಂದಿಗಳು , ಗಣ್ಯರು ಹಾಜರಿದ್ದರು.