ರಾಯಣ್ಣನ ಇತಿಹಾಸ ಅರಿತು ರಾಷ್ಟ್ರೇ್ರಮ ಬೆಳೆಸಿಕೊಳ್ಳಬೇಕು: ಶಾಸಕ ಮಹಾಂತೇಶ ಕೌಜಲಗಿ
ಬೆಳಗಾವಿ 13: ರಾಣಿ ಕಿತ್ತೂರು ಚೆನ್ನಮ್ಮರನ್ನು ನೆನೆದರೆ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಸ್ಮರಿಸಲೇಬೇಕು. ಬ್ರಿಟಿಷ್ ವಿರುದ್ಧ ಹೋರಾಟದ ಕಿಚ್ಚು ಹಚ್ಚಿ ತಮ್ಮ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ. ಇಂದಿನ ಯುವ ಸಮೂಹ ರಾಯಣ್ಣನ ಇತಿಹಾಸ ಅರಿತು ರಾಷ್ಟ್ರೇ್ರಮ ಬೆಳಸಿಕೊಳ್ಳಬೇಕು ಎಂದು ಬೈಲಹೊಂಗಲ ಶಾಸಕರು ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ ಅವರು ಕರೆ ನೀಡಿದರು.
ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ (ಜ.12) ಸಂಗೊಳ್ಳಿ ಶಾಲಾ ಆವರಣದಲ್ಲಿ ನಡೆದ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ಉತ್ಸವ -2025 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮುಖ್ಯಮಂತ್ರಿಗಳ ಆಶ್ವಾಸನೆಯಂತೆ ಸಂಗೊಳ್ಳಿಯಲ್ಲಿ ರಾಕ್ ಗಾರ್ಡನ್ ಹಾಗೂ ಸೈನಿಕ ಶಾಲೆ ನಿರ್ಮಾಣ ಮಾಡಿ ಈಗಾಗಲೇ ಲೋಕಾರೆ್ಣಗೊಳಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಈ ಭಾಗದ ಅಭಿವೃದ್ಧಿಗೆ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.ಅದೇ ರೀತಿಯಲ್ಲಿ ಬೇವೀನಕೊಪ್ಪ ಸೇತುವೆ ನಿರ್ಮಾಣವಾಗಿದೆ. ಏತನೀರಾವರಿ, ಕೃಷಿ, ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಇನ್ನೂ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಅಮಟೂರು ಬಾಳಪ್ಪ ಸೇರಿದಂತೆ ಬಹುಪಾಲು ಸ್ವಾತಂತ್ರ್ಯ ಹೋರಾಟಗಾರರು ಈ ಭಾಗದವರೇ ಆಗಿದ್ದಾರೆ ಎಂಬುದು ಹೆಮ್ಮಯ ವಿಚಾರ ಎಂದು ಶಾಸಕ ಮಹಾಂತೇಶ ಕೌಜಲಗಿ ತಿಳಿಸಿದರು.
ಕಿತ್ತೂರು ಕಲ್ಮಠ ಸಂಸ್ಥಾನದ ರಾಜಗುರು ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಮಾತನಾಡಿ ತಾಯಿಗೆ ನೀಡಿದ ಮಾತಿನಂತೆ ಸಂಗೊಳ್ಳಿ ರಾಯಣ್ಣ ತಾಯಿ ನಿಷ್ಠೆ ಮೇರಿದಿದ್ದಾರೆ. ರಾಯಣ್ಣ ಪ್ರಾಮಾಣಿಕತೆ, ಪ್ರಬುದ್ಧತೆಯ ಮಹಾ ಶೂರನಾಗಿದ್ದರು. ಕಿತ್ತೂರು ಚಿಕ್ಕ ಸಂಸ್ಥಾನವಾದರೂ ಇಡೀ ಬ್ರಿಟಿಷ್ ಆಡಳಿತದ ನಿದ್ದೆಗೆಡಿಸಿ ಸ್ವಾತಂತ್ರ್ಯ ಹೋರಾಟದ ಕಿಡಿ ಹೊತ್ತಿಸಿದರು. ಚನ್ನಮ್ಮ, ರಾಯಣ್ಣನ ದಿಟ್ಟತನ ಯುವ ಪೀಳಿಗೆಗೆ ಮೈಗೂಡಿಸಿಕೊಳ್ಳಬೇಕು ಎಂದರು.ಸರ್ಕಾರದಿಂದ ಶಾಲಾ ಪಠ್ಯಕ್ರಮದಲ್ಲಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಸೇರಿದಂತೆ ಈ ನಾಡಿನ ವೀರರ ಪರಿಚಯ ಆಗಬೇಕಿದೆ. ದೆಹಲಿ ಪಾರ್ಲಿಮೆಂಟ್‌ನಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಆಗಬೇಕಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರು ನಾಮಕರಣ ಆಗಬೇಕು ಎಂಬುದು ಜನರ ಬೇಡಿಕೆಯಾಗಿದೆ. ಅವರ ದೇಶಪ್ರೇಮವನ್ನು ನಾವೆಲ್ಲರೂ ಪ್ರೇರಣೆಯಾಗಿ ತೆಗೆದುಕೊಳ್ಳಬೇಕು ಎಂದು ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ತಿಳಿಸಿದರು.ಸಂಗೊಳ್ಳಿ ರಾಯಣ್ಣ ಒಡನಾಟದಲ್ಲಿದ್ದ ಬಿಚ್ಚುಗತ್ತಿ ಚನ್ನಪಸಪ್ಪನವರ ಮೂರ್ತಿ ಸಂಗೊಳ್ಳಿಯಲ್ಲಿ ನಿರ್ಮಾಣವಾಗಬೇಕಿದೆ. ರಾಯಣ್ಣನ ಇತಿಹಾಸ ಪರಿಚಯಿಸುವ ರಾಕ್ ಗಾರ್ಡನ್ ಈಗಾಗಲೇ ನಿರ್ಮಾಣವಾಗಿದೆ. ಸಾಕಷ್ಟು ಪ್ರೇಕ್ಷಕರನ್ನು ಆಕರ್ಷಿಸಿದೆ ಎಂದು ಸಂಗೊಳ್ಳಿಯ ಗುರು ಸಿದ್ಧಲಿಂಗೇಶ್ವರ ಹಿರೇಮಠ ಸಂಸ್ಥಾನದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ರಾಕ್ ಗಾರ್ಡನ್ ವೀಕ್ಷಣೆಗೆ ಬಹಳಷ್ಟು ದೂರದಿಂದ ಸಾರ್ವಜನಿಕರು, ಶಾಲಾ ಕಾಲೇಜು ಮಕ್ಕಳು ಬರುತ್ತಿದ್ದಾರೆ. ಹಾಗಾಗಿ ಮುಂಬರುವ ದಿನಗಳಲ್ಲಿ ಬರುವ ವೀಕ್ಷಕರಿಗೆ ರಾಕ್ ಗಾರ್ಡನ್ ಪ್ರವೇಶ ದರ ಶೇ. 50 ಇಳಿಕೆ ಮಾಡಬೇಕು ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಬೈಲಹೊಂಗಲ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಬೈಲಹೊಂಗಲ ತಹಶೀಲ್ದಾರ್ ಹಣಮಂತ ಶಿರಹಟ್ಟಿ, ಬೈಲಹೊಂಗಲ ಉಪ ಅಧೀಕ್ಷಕ ರವಿ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವದತ್ತಿ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನವರ, ಕಿತ್ತೂರು ತಹಶೀಲ್ದಾರ್ ರವೀಂದ್ರ ಹಾದಿಮನಿ, ಸಂಗೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ರೂಪಾ ಚಚಡಿ, ಉಪಾಧ್ಯಕ್ಷ ಫಕೀರ್ಪ ಕೋರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.