ಮತದಾನಕ್ಕಿಂತ ಮಹತ್ವವಾದದ್ದು ಮತ್ತೊಂದಿಲ್ಲ : ಡಾ. ಎ. ಕೆ. ಮಠ
ಗದಗ 24: ಹೊಸ ಮತದಾರರನ್ನು ಸೆಳೆಯುವುದು, ಉತ್ತೇಜಿಸುವುದು ಹಾಗೂ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಭಾರತಾಧ್ಯಂತ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದುಕೆ.ಎಲ್.ಇಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎ. ಕೆ. ಮಠ ತಿಳಿಸಿದರು. ಕೆ.ಎಲ್.ಇ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು. ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನದ ಭಾಗವಾಗಿ ಪ್ರತಿ ವರ್ಷ ಭಾರತದಲ್ಲಿ ಜನವರಿ 25 ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. 1950 ರಲ್ಲಿ ಸ್ಥಾಪನೆಯಾದ ಭಾರತದ ಚುನಾವಣಾ ಆಯೋಗದ ಸಂಸ್ಥಾಪನ ದಿನದ ನೆನಪಿಗಾಗಿ ಇದೇ ದಿನದಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಭಾರತದ ಚುನಾವಣಾ ಆಯೋಗವು ಒಂದು ಸಾಂವಿಧಾನಿಕ ಸಂಸ್ಥೆಯಾಗಿದ್ದು, ದೇಶದಲ್ಲಿ ಎಲಾ ್ಲಹಂತಗಳಲ್ಲಿ ಮುಕ್ತ ಮತ್ತುನ್ಯಾಯಯುತ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ಹೊಂದಿದೆ. ಇಂತಹ ಸಂಸ್ಥೆಗೆ ಬೆಂಬಲವಾಗಿ ನಿಲ್ಲುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಈ ವರ್ಷದ ರಾಷ್ಟ್ರೀಯ ಮತದಾರರ ದಿನದ ವಿಷಯವೇನೆಂದರೆ,' ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ' ಎಂಬ ಘೋಷಣೆಯ ನೀಡಲಾಗಿದೆ ಘೋಷಣೆಯನ್ವಯ ಪ್ರತೊಯೊಬ್ಬರು ಕಡ್ಡಾಯವಾಗಿ ತಮ್ಮ ರಾಜಕೀಯ ಹಕ್ಕನ್ನು ಚಲಾಯಿಸಬೇಕೆಂದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಎಲ್ಲ ಬೋಧಕ ಮತ್ತು ಬೋಧ ಕೇತರ ಸಿಬ್ಬಂಧಿ, ವಿದ್ಯಾರ್ಥಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.