ಲೋಕದರ್ಶನ ವರದಿ
ವಿಜಯಪುರ 30:ಕೈಗಾರಿಕಾ ಪ್ರದೇಶದಲ್ಲಿ ಕಿರು ಉದ್ಯಮ, ಗೃಹ ಉದ್ಯಮ ಸ್ಥಾಪನೆಗೆ ನಿವೇಶನ ಹಂಚಿಕೆ ಕುರಿತ ಅಜರ್ಿಗಳನ್ನು ನಿಯಮಿತವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗನದಲ್ಲಿ ಜರುಗಿದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಕರ್ಾರಿ ಕೆಲಸಗಳು ಸುಗಮವಾಗಿ, ನಿಯಮಿತವಾಗಿ ನಡೆಯುವ ದೃಷ್ಟಿಯಿಂದ ಸಕರ್ಾರ ಏಕಗವಾಕ್ಷಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ, ಫಲಾನುಭವಿಗಳಿಗೆ ಇದರ ಲಾಭ ದೊರಕಿಸಿಕೊಡಬೇಕು ಎಂದು ಹೇಳಿದರು.
ಜಿಲ್ಲೆಯ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಉನ್ನತೀಕರಣ, ಸ್ವಾಧೀನಪಡಿಸಿಕೊಂಡಿರುವ ಜಮೀನು ಅಭಿವೃದ್ದಿ, ಕೈಗಾರಿಕಾ ಪ್ರದೇಶ ಸ್ಥಾಪನೆ, ಅಗ್ನಿಶಾಮಕ ಠಾಣೆಯನ್ನು ಸ್ಥಾಪಿಸಲು ಜಾಗ ಗುರುತಿಸಿ, ಅದರ ಸಾಧಕ-ಬಾಧಕಗಳ ಕುರಿತ ವರದಿ, ಸಣ್ಣ ಕೈಗಾರಿಕಾ ಉದ್ದಿಮೆದಾರರ ಸೇವಾ ಸಂಘಗಳಿಗೆ ನಿವೇಶನ ಹಂಚಿಕೆ, ಕೆಐಎಡಿಬಿ ಕೈಗಾರಿಕಾ ಪ್ರದೇಶದ್ಲಿ ಉಪ ಪೋಲಿಸ್ ಠಾಣೆ ಸ್ಥಾಪನೆ ಸೇರಿದಂತೆ ಕಳೆದ ಸಭೆಯಲ್ಲಿ ಪ್ರಸ್ತಾಪಿಸಲಾದ ವಿವಿಧ ವಿಷಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು ಅನುಪಾಲನಾ ವರದಿ ಸಲ್ಲಿಸಿದ್ದಾರೆ.
ಕೈಗಾರಿಕಾ ಪ್ರದೇಶದಲ್ಲಿ ಉದ್ದಿಮೆ ಸ್ಥಾಪನೆಗೆ ಪಡೆದ ನಿವೇಶನದಲ್ಲಿ ಉದ್ದಿಮೆ ಘಟಕಗಳನ್ನು ಮಾತ್ರ ಸ್ಥಾಪಿಸಲು ಸೂಕ್ತ ನಿದರ್ೇಶನ ನೀಡಬೇಕು. ವೇರ್ಹೌಸ್ಗಳ ಸ್ಥಾಪನೆ ಬಗ್ಗೆ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಅನಾವಶ್ಯಕವಾಗಿ ಉಗ್ರಾಣ ಸ್ಥಾಪಿಸಲು ಅನುಮತಿ ನೀಡದೇ ಕೈಗಾರಿಕಾ ಉತ್ಪಾದನಾ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ ಭೂ ಉಪಯೋಗ ಬದಲಾವಣೆ, ವಿಶ್ವ ಸಾಮಾನ್ಯ ಕಾಯರ್ಾಗಾರ ಹಂಚಿಕೆ, ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬಂಧಪಟ್ಟ ಪರಿಹಾರ ವಿತರಣೆ, ವಿಜಯಪುರ ತಾಲೂಕಿನ ಕೈಗಾರಿಕಾ ಪ್ರದೇಶ ಅಲಿಯಾಬಾದ್ ಹಂತ-1 ಹಾಗೂ 2ರಲ್ಲಿ ಮೂಲಭೂತ ಸೌಕರ್ಯಗಳ ಪೂರೈಕೆ, ಉನ್ನತೀಕರಣಕ್ಕೆ ಕ್ರಮ ಜರುಗಿಸುವ ಬಗ್ಗೆ ಹಾಗೂ ವಿವಿಧ ಕೈಗಾರಿಕೋದ್ಯಮಿಗಳಿಂದ ವಿವಿಧ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನಾ ಘಟಕ ಸ್ಥಾಪನೆ, ವಿದ್ಯುತ್ ಪೂರೈಕೆ, ಜಮೀನು ಹಂಚಿಕೆ, ಉತ್ಪಾದನಾ ಘಟಕ ಆರಂಭಕ್ಕೆ ಅವಧಿ ವಿಸ್ತರಣೆ, ಕೌಶಲ್ಯಾಭಿವೃದ್ದಿ ಮತ್ತು ಮಾಹಿತಿ ತಂತ್ರಜ್ಞಾನ ಅಭಿವೃದ್ದಿಗೆ ಅನುಮೋದನೆ ನೀಡುವ ಕುರಿತು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಬಂದಿರುವ ಅಜರ್ಿಗಳ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ ಕಿಶೋರ ಸುರಳಕರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿದರ್ೇಶಕ ಟಿ.ಸಿದ್ದಣ್ಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.