ಸರ್ ಸಿದ್ಧಪ್ಪ ಕಂಬಳಿ ಅವರ ಪುಣ್ಯ ಸ್ಮರಣೆ

Pious memory of Sir Siddappa Kambali

ಸರ್ ಸಿದ್ಧಪ್ಪ ಕಂಬಳಿ ಅವರ ಪುಣ್ಯ ಸ್ಮರಣೆ

ಹುಬ್ಬಳ್ಳಿ 26: ಹುಬ್ಬಳ್ಳಿಯಲ್ಲಿ ಹುಟ್ಟಿ ಬೆಳೆದ ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ ಮುಂಬೈ ಪ್ರೆಸಿಡೆನ್ಸಿಯಲ್ಲಿ ಹಲವಾರು ಖಾತೆಗಳಲ್ಲಿ ಸಚಿವರಾಗಿದ್ದ ಅದರಲ್ಲೂ ಶಿಕ್ಷಣ ಖಾತೆ ಸಚಿವರಾಗಿದ್ದಾಗ ಉತ್ತರ ಕರ್ನಾಟಕದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಮರೆಯಲಾಗದ ಕೊಡುಗೆ ನೀಡಿದ ಸರ್ ಸಿದ್ಧಪ್ಪ ಕಂಬಳಿ ಅವರ ಪುಣ್ಯ ಸ್ಮರಣೆ ನಿಮಿತ್ತ ಪಾಲಿಕೆ ಎದುರಿಗೆ ಇರುವ ಸರ್ ಸಿದ್ಧಪ್ಪ ಕಂಬಳಿ ಅವರ ಮೂರ್ತಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ​‍್ಣ ಮಾಡುವ ಮೂಲಕ ಗೌರವಅರೆ​‍್ಣ ಮಾಡಿ, ನಮನಗಳನ್ನು ಸಲ್ಲಿಸಲಾಯಿತು. ಸರ್ ಸಿದ್ಧಪ್ಪ ಕಂಬಳಿ ಅವರು ಮಾಡಿದ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್‌.ಎಂ.ಸಾತ್ಮಾರ,  ಉಪಾಧ್ಯಕ್ಷ ಚನ್ನಬಸಪ್ಪ ಧಾರವಾಡ ಶೆಟ್ಟರ, ಡಾ. ಬಸವಕುಮಾರ ತಲವಾಯಿ, ಮುಂತಾದವರು ಇದ್ದರು.