ರಾಣೇಬೆನ್ನೂರು30: ವೇಗವಾಗಿ ಚಲಿಸುತ್ತಿದ್ದ ಪೊಲೀಸ್ ಜೀಪ್ ಹಾಗೂ ಸ್ಕೂಟರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಇನ್ನೋರ್ವ ಮಹಿಳೆ ಗಂಭೀರ ಗಾಯಗೊಂಡ ಘಟನೆ ನಗರದ ಹೊರ ವಲಯದ ಮಾಗೋಡ ರಸ್ತೆಯಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಕೊಪ್ಪಳ ಜಿಲ್ಲೆ ಯಲಬುರ್ಗ ತಾಲೂಕ ಸಂಕನೂರ ಗ್ರಾಮದ ಸವಿತಾ ಶಿವಾನಂದ ಶಶಿಮಠ (24) ಎಂದು ಗುರುತಿಸಲಾಗಿದೆ.
ಗಾಯಾಳು ತಾಲೂಕಿನ ಬೆನಕನಕೊಂಡ ಗ್ರಾಮದ ಕವಿತಾ ಉರ್ಪ ಕಲ್ಲವ್ವ ಸಂಜೀವಪ್ಪ ಕೋದಾರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಮೃತಳು ಸ್ಥಳೀಯ ಮೈಕ್ರೋ ಫೈನಾನ್ಸ್ನ ಶಾಖೆಯಲ್ಲಿ ಫೀಲ್ಡ್ ಆಫೀಸರಾಗಿ ಸೇವೆ ಸಲ್ಲಿಸುತ್ತಿದ್ದು ಹಾಗೂ ಗಾಯಾಳು ಸಹ ಅದೇ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು, ಕಾರ್ಯ ನಿಮಿತ್ಯ ಚಳಗೇರಿ ಗ್ರಾಮಕ್ಕೆ ತೆರಳುವಾಗ ಈ ಘಟನೆ ನಡೆದಿದೆ, ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ