ಐದು ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆ
ಹಾವೇರಿ 02 : ಇಲ್ಲಿನ ತಾಪಂ ಕಚೇರಿಯಲ್ಲಿ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎಂ ಮೈದೂರ ರವರ ಅಧ್ಯಕ್ಷೆತೆಯಲ್ಲಿ ಐದು ಇಲಾಖೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಿತು.
ಸಭೆಯಲ್ಲಿ ಸದಸ್ಯ ಕಾರ್ಯದರ್ಶಿಗಳಾದ ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಯ 14 ಜನ ಸದಸ್ಯರುಗಳು ಮತ್ತು 5 ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.ಈ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿ,ಮಧ್ಯದಲ್ಲಿ ಕೆಲವೊಂದು ಸದಸ್ಯರು ಅವರ ಬೇಡಿಕೆಗಳ ಬಗ್ಗೆ ಪ್ರಶ್ನಿಸಿದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜರೂರು ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ವಿವರಿಸಿದರು.ಪ್ರಾಧಿಕಾರದ ಅಧ್ಯಕ್ಷರು ಇಲಾಖೆಯವರಿಗೆ ಈ ಬಗ್ಗೆ ಹೆಚ್ಚಿನ ಆಸಕ್ತಿವಹಿಸಿ ಅವರ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮವಹಿಸಲು ಸೂಚಿಸಿದರು.