ಶಾಲಾ ಕೊಠಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ

Puja for school room, road development work

ಶಾಲಾ ಕೊಠಡಿ, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ  

ಬೆಳಗಾವಿ 24 :  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಶಾಲಾ ಕೊಠಡಿಗಳ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.   ತಾರೀಹಾಳ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯೆಂದ ಮಂಜೂರಾದ 3 ಶಾಲಾ ಕೊಠಡಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಅನುಪಸ್ಥಿತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಸ್ಥಳೀಯರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಇದೇ ವೇಳೆ, ಬಸ್ತವಾಡ ಗ್ರಾಮದ ಎಸ್ ಸಿ ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೂಡ ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಪೂಜೆ ನೆರವೇರಿಸಿದರು.