ಬೆಳಗಾವಿ, ಜೂ.18: ಜಿಲ್ಲೆಯಲ್ಲಿ ಸ್ವಂತ ಉಪಯೋಗಕ್ಕಲ್ಲದ ಕೃಷಿ ಮತ್ತು ಕೃಷಿಯೇತರ ಸರಕುಗಳ ಉತ್ಪಾದನೆ, ವಿತರಣೆ ,ಮಾರಾಟ, ಸೇವೆ ಮತ್ತಿತರ ಆಥರ್ಿಕ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟಿತ ಮತ್ತು ಅಸಂಘಟಿತ ವಲಯದ ಎಲ್ಲಾ ಉದ್ಯಮಗಳ ಗಣತಿ ಕಾರ್ಯವನ್ನು ಆರಂಭಿಸಲಾಗುತ್ತಿದ್ದು, ಮುಂದಿನ ಮೂರು ತಿಂಗಳಲ್ಲಿ ಗಣತಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ(ಜೂ.18) ನಡೆದ ಏಳನೇ ಆಥರ್ಿಕ ಗಣತಿಯ ಜಿಲ್ಲಾ ಉಸ್ತುವಾರಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಣತಿದಾರರ ನೇಮಕಾತಿ ಪ್ರಕ್ರಿಯೆ ಮತ್ತು ತರಬೇತಿಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಮೂಲಕ ಭಾರತ ಸಕರ್ಾರದ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಮಾರ್ಗಸೂಚಿಯ ಪ್ರಕಾರ ಗಣತಿ ಆರಂಭಿಸುವಂತೆ ಗಣತಿ ಕಾರ್ಯದ ಹೊಣೆಗಾರಿಕೆ ಹೊಂದಿರುವ ಸಾಮಾನ್ಯ ಸೇವಾ ಸಂಸ್ಥೆ(ಸಿ.ಎಸ್.ಸಿ)ಯ ಪ್ರತಿನಿಧಿಗಳಿಗೆ ಸೂಚನೆ ನೀಡಿದರು.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರತಿಯೊಂದು ಕಟ್ಟಡಕ್ಕೂ ಭೇಟಿ ನೀಡಿ ಸಾರ್ವಜನಿಕ ಹಾಗೂ ಖಾಸಗಿ ವಲಯದಲ್ಲಿರುವ ಸಂಘಟಿತ ಮತ್ತು ಅಸಂಘಟಿತ ವಿಭಾಗಗಳ ವಿವಿಧ ರೀತಿಯ ಆಥರ್ಿಕ ಚಟುವಟಿಕೆಗಳನ್ನು ಹೊಂದಿರುವ ಕೃಷಿ ಹಾಗೂ ಕೃಷಿಯೇತರ ಉದ್ಯಮಗಳ ಪಟ್ಟಿಯನ್ನು ತಯಾರಿಸುವುದು ಈ ಆಥರ್ಿಕ ಗಣತಿಯ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
7ನೇ ಆಥರ್ಿಕ ಗಣತಿಯಡಿ ಉದ್ಯಮಗಳ ಗಣತಿಯ ಕ್ಷೇತ್ರ ಕಾರ್ಯವನ್ನು ಮತ್ತು ಮೊದಲನೇ ಹಂತದ ಮೇಲ್ವಿಚಾರಣೆಯನ್ನು ಇದೇ ಪ್ರಥಮ ಬಾರಿಗೆ ಕಾಮನ್ ಸವರ್ೀಸ್ ಸೆಂಟರ್, ಇ-ಗವರ್ನನ್ಸ್ ಸವರ್ೀಸ್ ಲಿಮಿಟೆಡ್ (ಸಿ.ಎಸ್.ಸಿ) ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯ ವತಿಯಿಂದ ಮೊಬೈಲ್ ಆಪ್ ಮೂಲಕ ಕೈಗೊಳ್ಳಲಾಗುವುದು.
ಗಣತಿ ಕಾರ್ಯವು ಇದೇ ತಿಂಗಳಲ್ಲಿ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್ ಅಂತ್ಯದವರೆಗೆ ಏಳನೇ ಆಥರ್ಿಕ ಗಣತಿ ನಡೆಯಲಿದೆ. ಈ ಕಾರ್ಯವನ್ನು ಸಂಬಂಧಿಸಿದ ಇಲಾಖೆಗಳು ಸಮರ್ಪಕವಾಗಿ ನಡೆಸಬೇಕು. ಉದ್ದಿಮೆದಾರರು ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು.
ದೇಶದಲ್ಲಿ ಭವಿಷ್ಯದ ಆಥರ್ಿಕ ಯೋಜನೆ ಹಾಗೂ ಕಾರ್ಯಕ್ರಮಗಳ ರೂಪಿಸುವಿಕೆ ಮತ್ತು ಅನುಷ್ಠಾನ ಕೂಡ ಇದೇ ಗಣತಿಯ ಅಂಕಿ-ಅಂಶಗಳನ್ನು, ವರದಿಯನ್ನು ಆಧಾರವಾಗಿಟ್ಟುಕೊಳ್ಳುವುದರಿಂದ ನಿಖರವಾಗಿ ಗಣತಿ ಕಾರ್ಯ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿದರ್ೇಶನ ನೀಡಿದರು.
ಸಾರ್ವಜನಿಕರು ಸಮರ್ಪಕವಾಗಿ ಮಾಹಿತಿ ನೀಡದಿದ್ದರೆ ಆಥರ್ಿಕ ಗಣತಿಯ ಉದ್ದೇಶ ಸಫಲವಾಗುವುದಿಲ್ಲ. ಆದ್ದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತುನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಗಣತಿ ಕಾರ್ಯ ನಡೆಸಲಿರುವ ಸಿ.ಎಸ್.ಸಿ. ಸಿಬ್ಬಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ಗಣತಿಗೆ ಸಂಬಂಧಿಸಿದಂತೆ ತರಬೇತಿ ಕಾರ್ಯ ಕೂಡ ಆರಂಭಿಕ ಹಂತದಲ್ಲಿ ಇರುವುದರಿಂದ ಗಣತಿಯ ವಿಧಾನಗಳ ಬಗ್ಗೆ ಆರಂಭಿಕ ಹಂತದಲ್ಲಿಯೇ ಅರಿತುಕೊಂಡು ಕೊನೆ ಕ್ಷಣದವರೆಗೆ ಕಾಯದೇ ಕೂಡಲೇ ಗಣತಿ ಕಾರ್ಯ ಆರಂಭಿಸುವಂತೆ ಸಲಹೆ ನೀಡಿದರು.
ಸಾಮಾನ್ಯ ಸೇವಾ ಸಂಸ್ಥೆ ಕೂಡ ಹೆಚ್ಚಿನ ಗಣತಿದಾರರನ್ನು ನೇಮಿಸಿಕೊಂಡು ಕ್ಷೇತ್ರ ಕಾರ್ಯವನ್ನು ಚುರುಕುಗೊಳಿಸುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ., ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ರೇಖಾ ಶೆಟ್ಟರ್, ಸಹಾಯಕ ಸಾಂಖ್ಯಿಕ ಅಧಿಕಾರಿ ಪಿ.ಜಿ.ಕುಲಕಣರ್ಿ, ತಹಶಿಲ್ದಾರರು, ತಾಲ್ಲೂಕು ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.