ಶಾಲೆಗಳಿಗೆ ಜಿಲ್ಲಾಧಿಕಾರಿಗಳ ಭೇಟಿ

ಗದಗ 30: ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು ಗದಗ ಬೆಟಗೇರಿಯಲ್ಲಿನ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆ ನಂ 7 ಹಾಗೂ ಮೋರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದರಲ್ಲದೇ ಮಕ್ಕಳಿಗೆ ನೀಡುವ ಶಿಕ್ಷಣ,ಆಹಾರ ಮತ್ತು ಸ್ವಚ್ಛತೆ ಸೇರಿದಂತೆ ಇತರ ಸೌಕರ್ಯಗಳ ಕುರಿತು ಶಿಕ್ಷಕರಿಂದ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿ ಮಕ್ಕಳೊಂದಿಗೆ ಜಿಲ್ಲಾಧಿಕಾರಿಗಳು ಸಂವಾದ ನಡೆಸಿದರು.