ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ.26 ರಂದು ಶಿರಹಟ್ಟಿ ಬಂದ್‌: ಮುತ್ತು ಭಾವಿಮನಿ

Shirahatti bandh on December 26 demanding the resignation of Union Home Minister Amit Shah: Muthu B

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿ.26 ರಂದು ಶಿರಹಟ್ಟಿ ಬಂದ್‌: ಮುತ್ತು ಭಾವಿಮನಿ 

ಶಿರಹಟ್ಟಿ 24 : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನದ ಪಿತಾಮಃ ಡಾ. ಬಾಬಾ ಸಾಹೇಬ್ ಅಂಬೇಡ್ಕರ ಅವರ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡಿದ ಕಾರಣ ಅಮಿತ್ ಶಾ ಅವರು ಕೂಡಲೇ ಗೃಹ ಸಚಿವ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಶಿರಹಟ್ಟಿ ತಾಲೂಕಾ ಎಸ್‌ಎಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜ ಭಾವಿಮನಿ ಹೇಳಿದರು.ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ಧಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಲೋಕಸಭೆಯ ಕಲಾಪದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ ಬಗ್ಗೆ ಸದನದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದು ನಮ್ಮ ದೇಶದ ಇಡೀ ಜನತಗೆ ಬೇಸರ ತಂದಿದೆ. ಇಂತಹ ಅವಹೇಳನಾಕಾರಿ ಮಾತುಗಳನ್ನಾಡಲು ಕೇಂದ್ರ ಸರ್ಕಾರ ಅವಕಾಶ ಕೊಡಬಾರದು, ಇಂಥಹ ಅವಹೇಳನಾಕಾರಿ ಮಾತುಗಳನ್ನಾಡಿದ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಗೃಹ ಸಚಿವ ಹುದ್ದೆಯಿಂದ ವಜಾಗೊಳಿಸಿ, ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕೆಂದು ಡಿಸೆಂಬರ್ 26ರಂದು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ವಿವಿಧ ಕನ್ನಡಪರ, ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಶಿರಹಟ್ಟಿ ಬಂದ್‌ಗೆ ಕರೆ ನೀಡಿದ್ದು, ಅಂದು ನಡೆಯುವ ಈ ಬೃಹತ್ ಬಂದ್ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲ ಸಂಘಟನೆಗಳು, ಕಾಂಗ್ರೆಸ್ ಪಕ್ಷದ ಎಲ್ಲ ಕಾರ್ಯಕರ್ತರು, ಶಿರಹಟ್ಟಿ ವರ್ತಕರ ಸಂಘಗಳು ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕೆಂದು ಎಲ್ಲರಲ್ಲಿ ವಿನಂತಿಸಿದರು.   

ಈ ಸಂಧರ್ಭದಲ್ಲಿ ದೇವೆಂದ್ರ ಶಿಂಧೆ, ಹಮೀದ ಸನದಿ, ಚಾಂದಸಾಬ ಮುಳಗುಂದ, ಸುರೇಶ ಬೀರಣ್ಣವರ, ಮಹಾಂತೇಶ ದಶಮನಿ, ಬಸವರಾಜ ಕಂಬಳಿ, ಸಂತೋಷ ಕುರಿ, ಪ್ರಕಾಶ ಬಡೆಣ್ಣವರ, ಮಲೀಕ್ ಒಂಟಿ, ಮಂಜುನಾಥ ಗುಡಿಮನಿ ಸೇರಿದಂತೆ ಇನ್ನೂ ಅನೇಕರಿದ್ದರು.