ಹಡಪದ ಅಪ್ಪಣ ಜಯಂತಿ: ಸರ್ಕಾರಿ ಕಾರ್ಯಕ್ರಮವಾಗಿ ಆಚರಣೆ

ಕೊಪ್ಪಳ 09: ಇದೇ ಜುಲೈ. 16 ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯನ್ನು ಈ ಬಾರಿಯೂ ಸರ್ಕಾರಿ  ಕಾರ್ಯಕ್ರಮವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಹೇಳಿದರು. 

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆಯನ್ನು ಜಿಲ್ಲಾ ಕೇಂದ್ರದಲ್ಲಿ ಆಚರಿಸುವ ಕುರಿತು ಸಂಬಂಧ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಜು. 16 ರಂದು ಕೊಪ್ಪಳದಲ್ಲಿ ಶ್ರದ್ಧ ಭಕ್ತಿಭಾವದಿಂದ ಆಚರಿಸಲಾಗುವುದು.  ಅಂದು ಬೆಳಿಗ್ಗೆ 9 ಗಂಟೆಗೆ ಶಿವಶರಣ ಹಡಪದ ಅಪ್ಪಣ್ಣರವರ ಭಾವಚಿತ್ರದೊಂದಿಗೆ ಮೆರವಣಿಗೆಯು ಕೋಟೆ ರಸ್ತೆಯ ಮಹೇಶ್ವರ ದೇವಸ್ಥಾನ ಬಳಿಯಿಂದ ಹೊರಟು, ಗಡಿಯಾರ ಕಂಭ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ ಸಾಹಿತ್ಯ ಭವನದವರೆಗೆ ಸಾಗಿ ಬರಲಿದೆ.  ನಂತರ ಬೆಳಿಗ್ಗೆ 11 ಗಂಟೆಗೆ ಸಾಹಿತ್ಯ ಭವನದಲ್ಲಿ ವೇದಿಕೆ ಸಮಾರಂಭ ಜರುಗಲಿದೆ.  ಜಯಂತಿ ಆಚರಣೆ  ಅಂಗವಾಗಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು.  ಕಾರ್ಯಕ್ರಮದಲ್ಲಿ ಆಗಮಿಸಿದ ಗಣ್ಯರಿಗೆ ಶಿವಶರಣ ಹಡಪದ ಅಪ್ಪಣ್ಣರ ಕುರಿತಾದ ಕಿರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬೇಕು.  ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಎಲ್ಲ ಸಮಾಜದ ಮುಖಂಡರು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಮೆರವಣಿಗೆ ಸಂದರ್ಭದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್, ನಗರಸಭೆಯಿಂದ ಅಗತ್ಯ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.  ಮೆರವಣಿಗೆಯಲ್ಲಿ ಎರಡು ಕಲಾ ತಂಡಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡಬೇಕು.  ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸುವಂತೆ ಶಿಕ್ಷಣ ಇಲಾಖೆ ಹಾಗೂ ಎಲ್ಲಾ ಪಂಚಾಯತ್ಗಳು ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯದಾ ಅಯಿಷಾ ಅವರು ಸೂಚನೆ ನೀಡಿದರು.  

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯಕ ನಿದರ್ೇಶಕ ಸಿದ್ದಲಿಂಗೇಶ ಯಂಕಣ್ಣನವರ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎ.ಬಸವರಾಜ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರಾದ ಮಂಜುನಾಥ ಅಂದ್ರಾಳ್, ಮಾರ್ಕಡೆಪ್ಪ ಗಿಣಗೇರಿ, ಗವಿಸಿದ್ದಪ್ಪ ಕಾಟ್ರಳ್ಳಿ, ಶರಣಪ್ಪ ದದೇಗಲ್, ಬಸಪ್ಪ ಹಲಗೇರಿ, ಗವಿಸಿದ್ದಪ್ಪ ಗುಳದಳ್ಳಿ, ನಿಂಗಪ್ಪ ಅಂದ್ರಾಳ್, ನಾಗರಾಜ ನರೇಗಲ್ ಸೇರಿದಂತೆ ಗಣ್ಯರು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.