ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ

Street drama performance on road safety

ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶನ  

ಯಮಕನಮರಡಿ 29 : ಇತ್ತಿಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚುಹೆಚ್ಚಿಗೆ ನಡೆಯುತ್ತಿದ್ದು ಈ ಕುರಿತು ಪ್ರಯಾಣಿಕರು ಹಾಗೂ ಪಾದಚಾರಿಗಳಿಗೆ ವಾಹನ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸಾರಿಗೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿವಿಧ ಸ್ಥಳಗಳಲ್ಲಿ ಬೀದಿ ನಾಟಕದ ಮೂಲಕ ರಸ್ತೆ ಸುರಕ್ಷತೆ ಕುರಿತು ಕಾರ್ಯಕ್ರಮ ಆಯೋಜಿಸಲಾಗಿತ್ತು. ಹತ್ತರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ಹತ್ತರಗಿ ಟೂಲ್ ನಾಕಾ ಆವರಣದಲ್ಲಿ ದಿ 28 ರಂದು ದುಳಗನವಾಡಿ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನವನ್ನು ಮಹಿಳಾ ಮಕ್ಕಳ ಕಲ್ಯಾಣ ಸಂಸ್ಥೆ ಬೆಳಗಾವಿ ಇವರ ಸಹಯೋಗದಲ್ಲಿ  ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ರಾಷ್ಟ್ರೀಯ ಹೆದ್ದಾರಿ ಮುಖ್ಯಸ್ಥರಾದ ರವೀಂದ್ರ ವಾದ್ಯ ನುಡಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು. ಸುರೇಖಾ ಪಾಟೀಲ , ಪ್ರಸಾದಗಿರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ಉಪಸ್ಥಿತರಿದ್ದರು.