ವಸಂತ ಮಡ್ಲೂರ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ
ಗದಗ 08: ಗದಗ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿ ವಸಂತ ಬಿ. ಮಡ್ಲೂರ ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಸದ್ಭಾವನಾ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ವಿಜಯಪುರ ಜಿಲ್ಲಾ ಮುದ್ದೇಬಿಹಾಳ ಘಟಕ, ವಿಜಯಪುರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ, ಜಾನಪದ ಯುವ ಬ್ರಿಗೇಡ್ ಹಾಗೂ ಸಾಧನ ಮಹಿಳಾ ಒಕ್ಕೂಟ ಮುದ್ದೇಬಿಹಾಳ ಮತ್ತು ಧರ್ಮಯುದ್ಧ ದಿನಪತ್ರಿಕಾ ಬಳಗ ಮುದ್ದೇಬಿಹಾಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಉತ್ಸವದ ಪ್ರಯುಕ್ತ ಸ್ವಾಮಿ ವಿವೇಕಾನಂದ ರಾಷ್ಟ್ರ ಮತ್ತು ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಯುವ ಸಂಭ್ರಮ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಾಜ್ಯ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗದಗ ಜಿಲ್ಲಾ ವಾರ್ತಾಧಿಕಾರಿ ವಸಂತ ಬಿ ಮಡ್ಲೂರ ಅವರ ಸೇವೆ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸರ್ಕಾರ ಮತ್ತು ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳ ನಿರಂತರ ಸಮನ್ವಯದಲ್ಲಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಯೋಜನೆಯನ್ನು ಜನ ಸಾಮಾನ್ಯರಿಗೆ ಮಾಧ್ಯಮದ ಮೂಲಕ ತಲುಪಿಸುವಲ್ಲಿ ಇವರ ಸೇವೆ ಅಪಾರವಿದ್ದು, ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಸಿದ್ದನಕೊಳ್ಳದ ಡಾ. ಶಿವಕುಮಾರ ಸ್ವಾಮೀಜಿ, ಶಾಸಕ ಮತ್ತು ಕೆಎಸ್‌ಡಿ ನಿಗಮದ ಅಧ್ಯಕ್ಷ ಸಿ.ಎಸ್. ನಾಡಗೌಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಗುರುರಾಜ ಹೊಸಕೋಟೆ, ಪುರಸಭೆ ಅಧ್ಯಕ್ಷ ಮೆಹಬೂಬ ಗೊಳಸಂಗಿ, ಬೆಲ್ ಬಾಟಮ್ ಚಿತ್ರ ಖ್ಯಾತಿಯ ಕಲಾವಿದ ಕಡಬಗೆರೆ ಮುನಿರಾಜು, ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ಜಾನಪದ ಬಾಲಾಜಿ, ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ, ಗದಗ ಜಿಲ್ಲಾಧ್ಯಕ್ಷ ರವಿಕಾಂತ ಅಂಗಡಿ, ಬಿಜಾಪೂರ ಜಿಲ್ಲಾಧ್ಯಕ್ಷ ಪತ್ರಕರ್ತ ಪುಂಡಲೀಕ ಮುರಾಳ ಇದ್ದರು.