ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನ ರಾಜ್ಯ ಸರಕಾರ ಹಿಂಪಡೆಯಲು ರೈತ ಸಂಘ ಮನವಿ

The Farmers Association requested the state government to withdraw the decision to close the univer

ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನ ರಾಜ್ಯ ಸರಕಾರ ಹಿಂಪಡೆಯಲು ರೈತ ಸಂಘ ಮನವಿ 

ಹಾವೇರಿ 04 :ನಗರದ ಪ್ರವಾಸಿ ಮಂದಿರದಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚುವ ತೀರ್ಮಾನವನ್ನು ರಾಜ್ಯ ಸರಕಾರ ಹಿಂಪಡೆಯಲು ಹಾಗೂ ಮುಂಬರುವ ಬಜೆಟ್‌ನಲ್ಲಿ ವಿ.ವಿ ಗೆ ಅಗತ್ಯ ಅನುದಾನ ಒದಗಿಸುವಂತೆ ಕ್ರಮ ಕೈಗೊಳ್ಳಲು ಒತ್ತಾಯಿಸಲು ರಾಜ್ಯ ರೈತ ಸಂಘಟನೆಗಳು ಬೆಂಬಲ ಸೂಚಿಸಿ ಸರ್ಕಾರಕ್ಕೆ ಒತ್ತಡ ಹೇರುವಂತೆ ಕರ್ನಾಟಕ ರಾಜ್ಯ ರೈತ ಸಂಘ (ಹಸಿರು ಸೇನೆ) ಅಧ್ಯಕ್ಷರಾದ ಕೋಡಿಹಳ್ಳಿ ಚಂದ್ರಶೇಖರ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ  ವತಿಯಿಂದ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಅವರ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. ಕಳೆದ ಎರಡು ವರ್ಷಗಳ ಹಿಂದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರಾಜ್ಯ ಸರಕಾರ ಪ್ರಾರಂಭಿಸಿದ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ 9 ವಿ.ವಿ ಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟ ಉಪ ಸಮಿತಿಯು ತೀರ್ಮಾನಕ್ಕೆ ಮುಂದಾಗಿರುವುದು ಆತಂಕವನ್ನುಂಟು ಮಾಡಿದೆ.ರಾಜ್ಯ ಸರಕಾರದ ಈ ನಡೆಯಿಂದಾಗಿ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ.ಸರಕಾರ ಮುಚ್ಚಲು ಹೊರಟಿರುವ ಈ ವಿ.ವಿ ಗಳಿಗೆ ಪೂರ್ಣಕಾಲಿಕ ಉಪನ್ಯಾಸಕರು,ಬೋದಕೇತರ ಸಿಬ್ಬಂದಿ ನೇಮಕ.ಗ್ರಾಂಥಾಲಯ, ಪ್ರಯೋಗಾಲಯ,ಹಾಸ್ಟೇಲ್,ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು.ಈ ಸೌಕರ್ಯಗಳನ್ನು ಒದಗಿಸದಿರುವ ಸ್ಥಿತಿಯಲ್ಲಿಯೂ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ. ಮಾಡಿಕೊಂಡು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಉನ್ನತ ಶಿಕ್ಷಣ ಪಡೆಯಲು ವಿವಿಧ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಹಾವೇರಿ ವಿ.ವಿ ಯು ಮುನ್ನಡೆಯುತ್ತಿದೆ.ಸರಕಾರದಿಂದ ಅನುದಾನವಿರದ ಪರಿಸ್ಥಿತಿಯಲ್ಲಿಯೂ ಕೂಡ ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿರುವ ವಿಶ್ವವಿದ್ಯಾಲಯವನ್ನು ಮುಚ್ಚಲು ರಾಜ್ಯ ಸರಕಾರ ತೀರ್ಮಾನಿಸಿರುವುದು ಯಾವುದೇ ರೀತಿಯಲ್ಲಿ ಒಪ್ಪಲಾಗದು.ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ ವಿ.ವಿ ಯನ್ನು ಉಳಿಸಿ, ಬೆಳೆಸಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ. ವಿ.ವಿ ಗಳಲ್ಲಿ ರೈತರ ಮಕ್ಕಳು ಹೆಚ್ಚು ಓದುತ್ತಿದ್ದು,ರಾಜ್ಯದ ಎಲ್ಲಾ ರೈತ ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲಿಸಿ,ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕಾಗಿದೆ.ರಾಜ್ಯ ಮಟ್ಟದಲ್ಲಿ ಎಲ್ಲಾ ರೈತ ಸಂಘಟನೆಯ ಮುಖಂಡರು ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಬೇಕು ಎಂದು ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ ಅವರಿಗೆ ಕೊಟ್ಟ  ಮನವಿಯಲ್ಲಿ ತಿಳಿಸಲಾಗಿದೆ.   ಈ ಸಂದರ್ಭದಲ್ಲಿ ರಾಜ್ಯ ಮುಖಂಡರಾದ ಎಂ ಗೋಪಿನಾಥ,ಡಾ.ಎನ್ ಮೂರ್ತಿ,ಬಸವರಾಜ ಪೂಜಾರ,ಅಶೋಕ ಮರೆಣ್ಣನವರ,ಮಹಾದೇವಪ್ಪ ಮಾಳಮ್ಮನವರ, ಹನಮಂತಪ್ಪ ಕಬ್ಬಾರ,ಎಂ ಕೆ ಮಖಬೂಲ್ ಸೇರಿದಂತೆ ಅನೇಕರಿದ್ದರು.